CHITRADURGA NEWS | 07 NOVEMBER 2025
ಚಿತ್ರದುರ್ಗ: ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಕಾರ್ಯಕ್ರಮ ನ.11 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ವಾಲ್ಮೀಕಿ ಭವನದಲ್ಲಿ ನಡೆಯಲಿದೆ.
ಇದನ್ನೂ ಓದಿ: ಮೊಳಕಾಲ್ಮೂರು | ಮಕ್ಕಳು ಸೇರಿ 3 ಮೇಲೆ ಹುಚ್ಚು ನಾಯಿ ದಾಳಿ
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಛಲವಾದಿ ಮಹಾ ಸಂಸ್ಥಾನ ಗುರುಪೀಠದ ಶ್ರೀ ಬಸವ ನಾಗಿದೇವ ಸ್ವಾಮೀಜಿ ಅವರು ವಹಿಸುವರು. ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.
ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಸಂಸದ ಗೋವಿಂದ ಎಂ ಕಾರಜೋಳ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದ ಗೌಡ, ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ್, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ಪೀರ್, ನಗರಸಭೆ ಅಧ್ಯಕ್ಷೆ ಎಂ.ಪಿ. ಅನಿತಾ ರಮೇಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್. ಶಿವಣ್ಣ, ನಗರಸಭೆ ಮಾಜಿ ಅಧ್ಯಕ್ಷ ಹೆಚ್. ಸಿ. ನಿರಂಜನಮೂರ್ತಿ, ಛಲವಾದಿ ಮುಖಂಡರುಗಳಾದ ಎಸ್.ವಿ. ಗುರುಮೂರ್ತಿ, ಹೆಚ್. ಶೇಷಪ್ಪ, ಎಸ್.ಎನ್. ರವಿಕುಮಾರ್, ಎನ್.ಬಿ. ಭಾರ್ಗವಿ ದ್ರಾವಿಡ್, ಅಣ್ಣಪ್ಪ ಸ್ವಾಮಿ ಹೆಚ್. ಹಾಗೂ ಜಿಲ್ಲೆಯ ಉನ್ನತ ಅಧಿಕಾರಿಗಳು, ಜನಪ್ರತಿನಿಧಿಗಳು ಪಾಲ್ಗೊಳ್ಳುವರು.
ಪ್ರೊ. ನಟರಾಜ ಡಿ.ಹೆಚ್. ಅವರು ವಿಶೇಷ ಉಪನ್ಯಾಸ ನೀಡುವರು. ಗಂಜಿಗಟ್ಟೆ ಕೃಷ್ಣಮೂರ್ತಿ ಮತ್ತು ಸಂಗಡಿಗರಿಂದ ಗೀತಗಾಯನ ನಡೆಯಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 07 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಒನಕೆ ಓಬವ್ವ ಜಯಂತಿ ಅಂಗವಾಗಿ ನ.11 ರಂದು ಬೆಳಿಗ್ಗೆ 09 ಗಂಟೆಗೆ ಕೋಟೆಯ ಮುಂಭಾಗದಿಂದ ಆನೆ ಬಾಗಿಲು, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ, ಒನಕೆ ಓಬವ್ವ ವೃತ್ತ, ಮದಕರಿ ವೃತ್ತ ಮೂಲಕ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಭವ್ಯ ಮೆರವಣಿಗೆ ಜರುಗಲಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

