CHITRADURGA NEWS | 10 JUNE 2025
ಹೊಳಲ್ಕೆರೆ: 10ನೇ ತರಗತಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ತಲಾ ಒಂದು ಲಕ್ಷ ರೂ.ಗಳ ಬಹುಮಾನ ನೀಡುತ್ತೇನೆ. ತಾಲ್ಲೂಕಿನಲ್ಲಿ ಕನಿಷ್ಠ 200 ಮಕ್ಕಳಾದರು 625 ಅಂಕಗಳನ್ನ ಪಡೆಯಬೇಕು. ಅದಕ್ಕಾಗಿ ಎರಡು ಕೋಟಿ ರೂ.ಗಳನ್ನು ಮೀಸಲು ಇಡುತ್ತೇನೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.
Also Read: ತುಸು ಇಳಿಕೆ ಕಂಡ ರಾಶಿ ಅಡಿಕೆ ಧಾರಣೆ

ಪಟ್ಟಣದ ಸಂವಿಧಾನಸೌಧದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಎರಡು ವರ್ಷ ಶಿಕ್ಷಣದಲ್ಲಿ ಹರುಷ, 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ ಕಾರ್ಯಾಗಾರ ಹಾಗೂ ಸರ್ಕಾರಿ ಸೌಲಭ್ಯಗಳ ವಿತರಣೆ ಮತ್ತು 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯಬೇಕಾದರೆ ಈಗಿನಿಂದಲೇ ಕಷ್ಟಪಟ್ಟು ಓದಬೇಕು. ತಂದೆ-ತಾಯಿಗಳು ನಿಮ್ಮ ಮೇಲೆ ನಿರೀಕ್ಷೆಯಿಟ್ಟುಕೊಂಡಿರುತ್ತಾರೆ.
ಗುರು-ಹಿರಿಯರಿಗೆ ಕೀರ್ತಿ ತರುವ ಜವಾಬ್ದಾರಿ ನಿಮ್ಮ ಮೇಲಿದೆ. ನೀವು ಓದುವ ಶಾಲೆಗಳಿಗೆ ದಿನಪತ್ರಿಕೆಗಳನ್ನು ಸರಬರಾಜು ಮಾಡಲಾಗುವುದು.
ಪತ್ರಿಕೆಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಿ. ಗುಣ ಮಟ್ಟದ ಶಾಲಾ-ಕಾಲೇಜುಗಳನ್ನು ಕಟ್ಟಿಸಿ ನುರಿತ ಶಿಕ್ಷಕರುಗಳನ್ನು ನೇಮಿಸಲಾಗಿದೆ. ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಶೂ, ಸಾಕ್ಸ್ , ಮೊಟ್ಟೆ, ಬಾಳೆಹಣ್ಣು ನೀಡಲಾಗುತ್ತಿದೆ.
Also Read: ಮುಂಗಾರು ಪೂರ್ವದಲ್ಲಿ ಕೃಷಿಕರಿಗೆ ಖುಷಿ ಕೊಟ್ಟ ಮಳೆರಾಯ ನಾಪತ್ತೆ
ಸರ್ಕಾರದಿಂದ ಎಲ್ಲಾ ಸೌಲಭ್ಯಗಳು ಸಿಗುತ್ತಿವೆ. ಯಾವುದೇ ಸೌಲತ್ತು ಇಲ್ಲದ ಕಷ್ಟದ ಕಾಲದಲ್ಲಿ ನಾವುಗಳು ಓದಿದ್ದೇವೆ. ನಿಮಗೆ ಎಲ್ಲಾ ರೀತಿಯ ಅನುಕೂಲಗಳಿವೆ. ಸದುಪಯೋಗಪಡಿಸಿಕೊಳ್ಳಿ. ಯಾವುದೇ ಒಂದು ದೇಶ ಅಭಿವೃದ್ದಿಯಾಗಬೇಕಾದರೆ ವಿದ್ಯಾವಂತರ ಸಂಖ್ಯೆ ಜಾಸ್ತಿಯಾಗಬೇಕು. ಹಾಗಾಗಿ ಕಷ್ಟಪಟ್ಟು ಓದಿ ಪಿ.ಯು.ಸಿ. ನಂತರ ತಾಂತ್ರಿಕ ಶಿಕ್ಷಣಕ್ಕೆ ಸೀಟು ಗಳಿಸುವುದು ಸುಲಭವಲ್ಲ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಉಪಾಧ್ಯಕ್ಷೆ ನಾಗರತ್ನ ವೇದಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಬಿಆರ್ಸಿ ಸುರೇಂದ್ರನಾಥ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕೇಶ್ ಮತ್ತು ವಿದ್ಯಾರ್ಥಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
