CHITRADURGA NEWS | 23 AUGUST 2024
ಚಿತ್ರದುರ್ಗ: ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ(Rain)ಯಿಂದಾಗಿ ಈರುಳ್ಳಿ ಹಾಗೂ ತೋಟಗಾರಿಕೆ ಬೆಳೆ ನಾಶ(damage)ವಾಗಿದ್ದು, ಪರಿಹಾರಕ್ಕೆ ಅಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕ್ಲಿಕ್ ಮಾಡಿ ಓದಿ: Traffic signal: ಟ್ರಾಫಿಕ್ ಸಿಗ್ನಲ್ ಸಮಸ್ಯೆಗೆ ಶೀಘ್ರ ಮುಕ್ತಿ | ಎಸ್ಪಿ ರಂಜಿತ್ ಕುಮಾರ್ ಬಂಡಾರು
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಡಿ.ಎಸ್.ಹಳ್ಳಿ, ಜೋಡಿಚಿಕ್ಕೇನಹಳ್ಳಿ, ತೋಪುರಮಾಳಿಗೆ, ದ್ಯಾಮವ್ವನಹಳ್ಳಿ, ಕಾಸವರಹಟ್ಟಿ, ದಂಡಿನಕುರುಬರಹಟ್ಟಿ, ನರೇನಾಳ್, ಜೆ.ಎನ್.ಕೋಟೆ, ಎಣ್ಣೆಗೆರೆ ಇನ್ನು ಮುಂತಾದ ಗ್ರಾಮಗಳಲ್ಲಿ ಬೆಳೆ ಹಾನಿಯಾಗಿರುವ ಚೀಕಲು ಈರುಳ್ಳಿಯನ್ನು ಪ್ರದರ್ಶಿಸಿದ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ವರ್ಷದ ಬರಗಾಲವನ್ನೆ ರೈತರು ಇನ್ನು ಸುಧಾರಿಸಿಕೊಳ್ಳಲು ಆಗದೆ ಸಾಲಗಾರರಾಗಿದ್ದಾರೆ. ಆರಂಭದಲ್ಲಿ ಉತ್ತಮ ಮಳೆಯಾಗಿದ್ದು, ಕಳೆದ ಇಪ್ಪತ್ತು ದಿನಗಳಿಂದ ಸುರಿದ ಮಳೆಗೆ ಈರುಳ್ಳಿ ಹಾಗೂ ಇನ್ನಿತರೆ ತೋಟಗಾರಿಕೆ ಬೆಳೆಗಳು ಕೊಳೆತು ನಾಶವಾಗಿವೆ.
ಕ್ಲಿಕ್ ಮಾಡಿ ಓದಿ: FDA suspended: ಟೆಂಡರ್ ಪ್ರಕ್ರಿಯೆಯಲ್ಲಿ ಕರ್ತವ್ಯ ಲೋಪ | ಎಫ್‌ಡಿಎ ಅಮಾನತು
ಕೃಷಿಗಾಗಿ ಸಾಲ ಮಾಡಿರುವ ರೈತ ಒಕ್ಕಲುತನಕ್ಕೆ ಹಾಕಿದ ಬಂಡವಾಳವೂ ಕೈಗೆ ಸಿಗದೆ ಕಂಗಾಲಾಗಿದ್ದಾನೆ. ತಕ್ಷಣವೇ ಬೆಳೆ ಸಮೀಕ್ಷೆ ನಡೆಸಿ ಹಾನಿಗೊಳಗಾಗಿರುವ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಬೆಳೆ ವಿಮೆಗೊಳಪಟ್ಟವರಿಗೆ ತಡ ಮಾಡದೆ ಬೆಳೆ ಪರಿಹಾರ ನೀಡಬೇಕೆಂದು ಜಿಲ್ಲಾಡಳಿತವನ್ನು ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.
ತಾಲ್ಲೂಕಿನಲ್ಲಿ ಹೆಚ್ಚಾಗಿ ಖುಷ್ಕಿ ಜಮೀನುಗಳಲ್ಲಿ ಸೂರ್ಯಕಾಂತಿ ಬೆಳೆದಿದ್ದು, ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಗೆ ಖರೀದಿಸಿ ಜಿಲ್ಲಾಡಳಿತ ರೈತರ ನೆರವಿಗೆ ಮುಂದಾಗಬೇಕೆಂದು ಆಗ್ರಹಿಸಿದರು.
ಚಿತ್ರದುರ್ಗ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ತಾಲ್ಲೂಕು ಅಧ್ಯಕ್ಷ ಬಿ.ಇ.ಮಂಜುನಾಥ, ರಾಮರೆಡ್ಡಿ, ಮಹಂತೇಶ್‍ರೆಡ್ಡಿ, ರಾಜಶೇಖರ್, ರಾಮರೆಡ್ಡಿ, ಪರಶಿವಣ್ಣ, ಪ್ರವೀಣ, ಮಾರುತಿ, ಸದಾಶಿವ, ನಾಗರಾಜ್‍ರೆಡ್ಡಿ, ಸುರೇಶ್‍ರೆಡ್ಡಿ, ಕೃಷ್ಣಪ್ಪ, ಲೋಕೇಶ, ಶಶಿಧರ, ಕೇಶವರೆಡ್ಡಿ, ಹರಳಯ್ಯ ಸೇರಿದಂತೆ ಇತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
