CHITRADURGA NEWS | 25 SEPTEMBER 2026
ಚಿತ್ರದುರ್ಗ: ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ ಯೋಜನೆಗಳನ್ನು 2026-27ನೇ ಸಾಲಿನಲ್ಲಿ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಿ, ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಸೆಪ್ಟೆಂಬರ್ 22 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅಕ್ಟೋಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನೆ ಸಲಕರಣೆ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ ಹಾಗೂ ದೃಷ್ಠದೋಷ ಹೊಂದಿರುವ ವಿಕಲಚೇನರಿಗೆ ಬ್ರೈಲ್ ಕಿಟ್ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್‍ಚೇರ್ ಯೋಜನೆ ಸೇರಿದಂತೆ ಒಟ್ಟು 14 ಫಲಾನುಭವಿ ಆಧಾರಿತ ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಫಲಾನುಭವಿಗಳು ಯೋಜನೆಗಳಿಗೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧುಕೇಂದ್ರಗಳಲ್ಲಿ https://sevaone.karnataka.gov.
ಇದನ್ನೂ ಓದಿ: ಚಿತ್ರದುರ್ಗ, ಹೊಳಲ್ಕೆರೆ ಸೇರಿ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ಹತ್ತಿರದ ಬಾಲಭವನ ಆವರಣದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08194-235284 ಹಾಗೂ ತಾಲ್ಲೂಕುವಾರು ಎಂ.ಆರ್.ಡಬ್ಲ್ಯೂಗಳ ದೂರವಾಣಿ ಸಂಖ್ಯೆ ಚಿತ್ರದುರ್ಗ – 9880821934, ಚಳ್ಳಕೆರೆ – 9611266930, ಹಿರಿಯೂರು – 9902888901, 9902898901, ಹೊಳಲ್ಕೆರೆ – 9740030227, ಹೊಸದುರ್ಗ -9741829990, ಮೊಳಕಾಲ್ಮೂರು -9742725576 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

