CHITRADURGA NEWS | 25 AUGUST 2026
ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸೈನಿಕರನ್ನು ಗುರಿಯಾಗಿಸಿಕೊಂಡು ಶೀಘ್ರ ಹಣ ಗಳಿಕೆ, ಉದ್ಯೋಗಾವಕಾಶ ಹಾಗೂ ಇ-ಕೆವೈಸಿ ಹೆಸರಿನಲ್ಲಿ ಸೈಬರ್ ವಂಚನೆ ಎಸಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ ಮಾಜಿ ಸೈನಿಕರು ಎಚ್ಚರಿಕೆಯಿಂದಿರಬೇಕು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ.
ಇದನ್ನೂ ಓದಿ: ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ | ಪಿ.ರಘು
ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿಗಳು, ಉದ್ಯೋಗ ಆಮಿಷ, ಹೆಚ್ಚಿನ ಲಾಭದ ಹೂಡಿಕೆ, ಬ್ಯಾಂಕ್ ಖಾತೆ ನವೀಕರಣ, ಮೊಬೈಲ್ ಮತ್ತು ವಾಟ್ಸಾಪ್ಗಳಲ್ಲಿ ಎ.ಪಿ.ಕೆ ಫೈಲ್ಗಳ ಸಂದೇಶ ರವಾನಿಸುವ ಮೂಲಕ ವಂಚಕರು ಸಾರ್ವಜನಿಕರನ್ನು ವಂಚಿಸುತ್ತಿದ್ದಾರೆ.
ಅಷ್ಟೇ ಅಲ್ಲದೆ, ಮೊಬೈಲ್ ಒ.ಟಿ.ಪಿ ಪಡೆದುಕೊಳ್ಳುವುದು, ನಕಲಿ ಕರೆ ಮಾಡಿ ಬೆದರಿಕೆ ಹಾಕುವುದು ಹಾಗೂ ‘ಡಿಜಿಟಲ್ ಅರೆಸ್ಟ್’ ನಂತಹ ಭೀತಿ ಹುಟ್ಟಿಸಿ ಹಣ ದೋಚುವ ಯತ್ನಗಳು ತೀವ್ರಗೊಂಡಿವೆ.
ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ಇಂತಹ ಯಾವುದೇ ಆಮಿಷಗಳಿಗೆ ಒಳಗಾಗಬಾರದು. ನಕಲಿ ಸಂದೇಶ ಮತ್ತು ಕರೆಗಳ ಕುರಿತು ಹೆಚ್ಚಿನ ಜಾಗ್ರತೆ ವಹಿಸಬೇಕು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ 12.97 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ | ಜಿಲ್ಲಾಧಿಕಾರಿ ವೆಂಕಟೇಶ್
ಒಂದು ವೇಳೆ ಯಾವುದೇ ರೀತಿಯ ಸೈಬರ್ ವಂಚನೆಗೊಳಗಾದಲ್ಲಿ ತಕ್ಷಣವೇ 1930 ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೋಂದಾಯಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

