
CHITRADURGA NEWS | 24 JANUARY 2026
ಚಿತ್ರದುರ್ಗ: 2026–27ನೇ ಶೈಕ್ಷಣಿಕ ವರ್ಷದಿಂದ ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಲಯ ಪ್ರಾರಂಭವಾಗಲಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವಾಲಯವು 2026–27ನೇ ಶೈಕ್ಷಣಿಕ ವರ್ಷದಿಂದ ಜಿಲ್ಲೆಯಲ್ಲಿ 1 ರಿಂದ 5ನೇ ತರಗತಿವರೆಗೆ ಕೇಂದ್ರಿಯ ವಿದ್ಯಾಲಯದ ಆರಂಭಿಸಲು ಅಧಿಕೃತ ಅನುಮತಿ ನೀಡಿರುವುದು ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆಯಾಗಿದ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಇದನ್ನೂ ಓದಿ: ಆಟೋ – ಬಸ್ ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯ
ಸಾಕಷ್ಟು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕೇಂದ್ರೀಯ ವಿದ್ಯಾಲಯ ಶಾಲೆಗೆ ಈಗ ಮುಹೂರ್ತ ಕೂಡಿ ಬಂದಿದೆ.
ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ ಎರಡು ಮೂರು ಕಡೆ ಜಾಗ ಗುರುತಿಸಿದ್ದನ್ನು ಕೆವಿ ಆಯುಕ್ತರು ನಿರಾಕರಿಸಿದ್ದರು. ಕೊನೆಗೆ ಜಾಲಿಕಟ್ಟೆ ಬಳಿ ರಿ.ಸ.ನಂ. 24ರಲ್ಲಿ 5 ಎಕರೆ ಜಾಗವನ್ನು ಗುರುತಿಸಿ, ಜಿಲ್ಲಾಡಳಿತ ಹಸ್ತಾಂತರಿಸಿದ ಬಳಿಕ ಅನುಮೋದನೆ ದೊರೆತಿದೆ. ಸದ್ಯಕ್ಕೆ ತಾತ್ಕಾಲಿಕವಾಗಿ ಶಾಲೆ ಪ್ರಾರಂಭಿಸಲು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ 12 ಕೊಠಡಿಗಳನ್ನು ಪೀಠೋಪರಕಣಗಳ ಸಮೇತ ಸಿದ್ಧ ಪಡಿಸಿ ಹಸ್ತಾಂತರಿಸಲಾಗಿತ್ತು.
ಇದನ್ನೂ ಓದಿ: ಆಟೋ, ಕ್ಯಾಬ್ ಚಾಲಕರಿಗೆ RTO ಮಹತ್ವದ ಸೂಚನೆ | ದಾಖಲೆಗಳೊಂದಿಗೆ ಕಾರ್ಯಾಚರಣೆಗೆ ಸಲಹೆ
ಈ ಎಲ್ಲಾ ವಿಷಯಗಳನ್ನು ಪರಿಗಣಿಸಿ, ಕೇಂದ್ರ ಶಿಕ್ಷಣ ಸಚಿವಾಲಯ 2026–27ನೇ ಶೈಕ್ಷಣಿಕ ಸಾಲಿಗೆ 1 ರಿಂದ 5ನೇ ತರಗತಿವರೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಕ್ರಮೇಣ ಬಾಲವಾಡಿ (ಎಲ್.ಕೆ.ಜಿ. ಮತ್ತು ಯು.ಕೆ.ಜಿ), 5ನೇ ತರಗತಿಯಿಂದ 10ನೇ ತರಗತಿವರೆಗೆ ಹಾಗೂ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲಾಗುವುದು. ಜಾಲಿಕಟ್ಟೆ ಬಳಿ ಕೇಂದ್ರೀಯ ವಿದ್ಯಾಲಯ ಶಾಲೆಗೆ ಸುಸಜ್ಜಿತ ಕಟ್ಟಡವನ್ನು ನಿರ್ಮಾಣಕ್ಕೆ ಶೀಘ್ರವಾಗಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೋವಿಂದ ಕಾರಜೋಳ ವಿವರಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
