
CHITRADURGA NEWS | 19 JANUARY 2024
ಚಿತ್ರದುರ್ಗ (CHITRADURGA): ನಿರುದ್ಯೋಗ ಯುವಕ ಯುವತಿಯರಿಗೆ ಇಲ್ಲಿದೆ ಸುವರ್ಣ ಅವಕಾಶ. ಕೂಡಲೇ ಅರ್ಜಿ ಸಲ್ಲಿಸಿ ಉದ್ಯೋಗದ ದಾರಿ ಕಂಡುಕೊಳ್ಳಿ.
ಇದನ್ನೂ ಓದಿ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ | ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವು | ಮಗು ಸೇರಿ ಮೂರು ಜನರಿಗೆ ಗಾಯ
ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ರುಡ್‍ಸೆಟ್ ಸಂಸ್ಥೆಯಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಮಹಿಳೆಯರಿಗೆ ಬ್ಯೂಟಿಷಿಯನ್ ಹಾಗೂ ನಿರುದ್ಯೋಗಿ ಯುವಕ ಯುವತಿಯರಿಗೆ ಕಂಪ್ಯೂಟರೈಸಡ್ ಅಕೌಂಟಿಂಗ್ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.

18 ರಿಂದ 45 ವರ್ಷದೊಳಗಿವರು ತರಬೇತಿಗೆ ಅರ್ಹರು. ಬ್ಯೂಟಿಷಿಯನ್ ತರಬೇತಿಗೆ ಕನಿಷ್ಠ 8ನೇ ತರಗತಿ ಹಾಗೂ ಕಂಪ್ಯೂಟರೈಸಡ್ ಅಕೌಂಟಿಂಗ್ ತರಬೇತಿಗೆ ಕಾಮರ್ಸ್ ಪದವಿ ಪಡೆದವರು ಜ.30 ರಂದು ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಇದನ್ನೂ ಓದಿ: ಜಮೀನು ಕಿತ್ತುಕೊಂಡರೆ, ಸಾವೊಂದೇ ದಾರಿ | ಟೋಲ್ ನಿರ್ಮಾಣಕ್ಕೆ ಅನ್ನದಾತರ ವಿರೋಧ
ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ. ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಉಳ್ಳವರಾಗಿರಬೇಕು. ತಮ್ಮ ಇತ್ತೀಚಿನ ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಬಿಪಿಎಲ್ ರೇಷನ್ ಕಾರ್ಡ್‌ನೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಇದನ್ನೂ ಓದಿ: ಕೆಟಿಎಂ ಬೈಕ್ ಕಾರಿನ ನಡುವೆ ಅಪಘಾತ | ಬೈಕ್ ಸವಾರ ಮೃತ
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9481778047, 9019299901, 8660627785, 8618282445 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
