CHITRADURGA NEWS | 06 MARCH 2026
ಚಿತ್ರದುರ್ಗ: ತೋಟಗಾರಿಕೆ ಇಲಾಖೆ ಜಾಗವನ್ನು ಜಿಲ್ಲಾಧಿಕಾರಿಗಳ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ನೀಡಲು ಸರ್ಕಾರ ಆದೇಶಿಸಿರುವುದನ್ನು ಹಿಂದಕ್ಕೆ ಪಡೆಯುವಂತೆ ಜಿಲ್ಲಾ ಹಾಪ್‌ಕಾಮ್ಸ್ ನ ರಾಜ್ಯ ಪ್ರತಿನಿಧಿ ಎಸ್.ಎಂ.ಎಲ್.ತಿಪ್ಪೇಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು.
ಇದನ್ನೂ ಓದಿ: 4ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ | ಭದ್ರೆಗೆ ಅನುದಾನಕ್ಕೆ ಬಿಗಿಪಟ್ಟು
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತೋಟಗಾರಿಕೆ ಇಲಾಖೆಗೆ ಸೇರಿದ ಆರು ಎಕರೆ ಹತ್ತು ಗುಂಟೆ ಹಾಗೂ ಹಾಪ್‌ಕಾಮ್ಸ್ ನ 20 ಗುಂಟೆ ಜಾಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣ ಮಾಡುವುದರಿಂದ ರೈತರು, ಪರಿಸರ ಪ್ರೇಮಿಗಳು ತೊಂದರೆ ಅನುಭವಿಸಬೇಕಾಗುತ್ತದೆ. 2156 ಗಿಡ-ಮರಗಳು ಈ ಜಾಗದಲ್ಲಿದ್ದು, ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಎಲ್ಲವನ್ನು ನಾಶಪಡಿಸಬೇಕಾಗುತ್ತದೆ.
ಯಾವುದೇ ಕಾರಣಕ್ಕೂ ಈ ಜಾಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟುವುದು ಬೇಡ. ಕುಂಚಿಗನಹಾಳ್ ಬಳಿ ಜಿಲ್ಲಾಧಿಕಾರಿ ಕಚೇರಿಗೆ ಕಟ್ಟಡ ಕಟ್ಟಿ ಅರ್ಧಕ್ಕೆ ನಿಲ್ಲಿಸಲಾಗಿದೆ. ಶಿಲ್ಪಭವನ, ಪೊಲೀಸ್ ಕವಾಯತು ಮೈದಾನದ ಜಾಗವನ್ನು ನೂತನ ಡಿಸಿ.ಕಚೇರಿ ಕಟ್ಟಡಕ್ಕೆ ಪಡೆದುಕೊಳ್ಳಲಿ. ಅದನ್ನು ಬಿಟ್ಟು ತೋಟಗಾರಿಕೆ ಇಲಾಖೆ ಜಾಗದ ಮೇಲೆ ಸರ್ಕಾರಕ್ಕೇಕೆ ಕಣ್ಣು ಎಂದು ಪ್ರಶ್ನಿಸಿದರು?
ರೈತರಿಗೆ ಬೀಜ, ಗೊಬ್ಬರ, ಕೃಷಿ ಪರಿಕರಗಳ ವಿತರಣೆಗಾಗಿಯೇ ಮೀಸಲಿದ್ದ, ಹಾಪ್‍ಕಾಮ್ಸ್ ಕಟ್ಟಡವನ್ನು ಕೆಡವುವುದು ಬೇಡ. ಒಂದು ವೇಳೆ ಇದೆ ಜಾಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಆರಂಭಿಸಿದರೆ ಉಗ್ರವಾದ ಹೋರಾಟ ನಡೆಸಲಾಗುವುದೆಂದು ಎಸ್.ಎಲ್.ಎಂ.ತಿಪ್ಪೇಸ್ವಾಮಿ ಎಚ್ಚರಿಸಿದರು.
ಇದನ್ನೂ ಓದಿ: ಮಾದಿಗ ಸಮುದಾಯದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ | ಒಳಮೀಸಲಾತಿಯಂತೆ ನೇಮಕಾತಿಗೆ ಆಗ್ರಹ
ಟಾರ್ಗೆಟ್ ಟೆನ್ ಥೌಸೆಂಡ್‍ನ ಸಿದ್ದರಾಜು ಮಾತನಾಡ, ಬಯಲುಸೀಮೆ ಚಿತ್ರದುರ್ಗದಲ್ಲಿ ಗಿಡಗಳನ್ನು ನೆಟ್ಟು ದೊಡ್ಡ ಮರವನ್ನಾಗಿ ಬೆಳೆಸುವುದು ತುಂಬಾ ಕಷ್ಟ. 2015 ರಿಂದ ಇಲ್ಲಿಯವರೆಗೂ ನಲವತ್ತು ಸಾವಿರ ಗಿಡಗಳನ್ನು ನೆಟ್ಟಿದ್ದೇವೆ. ಗಿಡ-ಮರಗಳನ್ನು ಕಡಿದರೆ ಉಸಿರಾಟಕ್ಕೆ ಶುದ್ದ ಗಾಳಿ ಇಲ್ಲದಂತಾಗಿ ಸಕಲ ಜೀವರಾಶಿಗಳು ತೊಂದರೆ ಅನುಭವಿಸಬೇಕಾಗುತ್ತದೆ.
ಕುಂಚಿಗನಹಾಳ್ ಸಮೀಪವೆ ಜಿಲ್ಲಾಧಿಕಾರಿ ನೂತನ ಕಚೇರಿ ಆರಂಭಿಸಿದರೆ ಚಿತ್ರದುರ್ಗ ವಿಸ್ತರಣೆಯಾಗಿ ಅಭಿವೃದ್ದಿಯಾಗುತ್ತದೆ. ತೋಟಗಾರಿಕೆ ಇಲಾಖೆ ಜಾಗದಲ್ಲಿ ನೂತನ ಕಚೇರಿ ನಿರ್ಮಾಣವಾಗುವುದು ಬೇಡ ಎಂದರು.
ಇದನ್ನೂ ಓದಿ: ಕರ್ನಾಟಕ ಮಾಧ್ಯಮ ಅಕಾಡೆಮಿ | ಪತ್ರಕರ್ತೆಯರಿಗೆ ವಿಶೇಷ ತರಬೇತಿ | ಅರ್ಜಿ ಅಹ್ವಾನ
ಸುದ್ದಿಗೋಷ್ಠಿಯಲ್ಲಿ ಹಾಪ್‌ಕಾಮ್ಸ್ ನ ಜಿಲ್ಲಾಧ್ಯಕ್ಷ ಶಂಕರಮೂರ್ತಿ, ಉಪಾಧ್ಯಕ್ಷ ಅರುಣ್, ನಿರ್ದೇಶಕರುಗಳಾದ ಕೆಂಚವೀರಪ್ಪ, ಚಂದ್ರಶೇಖರ್, ರೈತ ಮುಖಂಡ ಸೂರಪ್ಪ, ಸತ್ಯನಾರಾಯಣರೆಡ್ಡಿ ಮುರಳಿ, ನಾಗರಾಜ್‍ಬೇದ್ರೆ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
