
CHITRADURGA NEWS | 27 NOVEMBER 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ನ.29ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ಕೃಷಿಕರಿಗೆ ಸಾವಯವ ಕೃಷಿ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಬೀದಿ ನಾಯಿಗಳ ಆಶ್ರಯ ತಾಣ ನಿರ್ಮಿಸಲು ಪ್ರತ್ಯೇಕ ಜಾಗ ಗುರುತಿಸಿ | ADC ಸೂಚನೆ

ತರಬೇತಿ ಕಾರ್ಯಕ್ರಮದಲ್ಲಿ ತುಮಕೂರಿನ ನಿವೃತ್ತ ಕೃಷಿ ಅಧಿಕಾರಿ ಎಸ್.ರಾಜಶೇಖರಯ್ಯ ಅವರು ಸಾವಯವ ಕೃಷಿಯ ಅವಶ್ಯಕತೆ, ವಿವಿಧ ಸಾವಯವ ಪದ್ಧತಿಗಳು ಹಾಗೂ ಸಾವಯವ ಕೃಷಿಗೆ ಪೂರಕವಾದ ಜೀವಾಮೃತ, ಬೀಜಾಮೃತ, ಘನ ಜೀವಾಮೃತ ಮತ್ತು ವಿವಿಧ ಸಸ್ಯ ಜನ್ಯ ಕೀಟನಾಶಕಗಳ ತಯಾರಿಕೆ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ಮೂಲಕ ತೋರಿಸಿ ಕೊಡಲಿದ್ದಾರೆ.
ಆಸಕ್ತ 50 ಜನ ರೈತ ಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058ಗೆ ಕರೆ ಮಾಡಿ ತರಬೇತಿ ಸದುಪಯೋಗ ಪಡೆಯಬಹುದಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ನವೆಂಬರ್ 26 | ಯಾವ ಅಡಿಕೆಗೆ ಎಷ್ಟು ರೇಟ್
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
