CHITRADURGA NEWS | 21 JANUARY 2026
ಹೊಳಲ್ಕೆರೆ: ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರು ಕ್ಷೇತ್ರಗಳು ಹಾಗೂ 21 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಲ್ಲೂ ನಮ್ಮ ಕಾರ್ಯಕರ್ತರು ಗೆಲ್ಲಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದರು.
ಹೊಳಲ್ಕೆರೆ ತಾಲೂಕಿನ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 21 ಜನವರಿ | ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
ಹೊಳಲ್ಕೆರೆ ತಾಲೂಕಿನ 38 ಗ್ರಾಮ ಪಂಚಾಯಿತಿಗಳಲ್ಲೂ ಬಿಜೆಪಿ ಕಾರ್ಯಕರ್ತರು ಅಧಿಕಾರ ಹಿಡಿಯಬೇಕು. ಅದಕ್ಕಾಗಿ ಈಗಿನಿಂದಲೇ ಹಳ್ಳಿ ಹಳ್ಳಿಗಳಲ್ಲಿ ತಿರುಗಾಡಿ ಪಕ್ಷ ಸಂಘಟನೆ ಮಾಡಬೇಕು. ಪ್ರತಿ ಬೂತ್‍ನಲ್ಲೂ ಪಕ್ಷದ ಕಾರ್ಯಕರ್ತರನ್ನು ಪ್ರೀತಿ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಗಟ್ಟಿಗೊಳಿಸಬೇಕು ಎಂದು ಸಲಹೆ ನೀಡಿದರು.
ಸಾಮಾನ್ಯ ಕಾರ್ಯಕರ್ತನನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿ ಮಾಡುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ ಮಾತ್ರ. ಹತ್ತು ವರ್ಷಗಳ ನಂತರ ರಾಮಗಿರಿ ಕುಮಾರಣ್ಣ ಅವರಿಗೆ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಲಾಗಿದೆ ಎಂದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 21 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಮಾತನಾಡಿ, ತಲ ತಲಾಂತರಗಳಿಂದಲೂ ಅಧಿಕಾರ ನಡೆಸುತ್ತ ಬಂದಿರುವ ಕಾಂಗ್ರೆಸ್ ಎಂದೂ ದೇಶದ ಅಭಿವೃದ್ದಿ ಬಗ್ಗೆ ಚಿಂತಿಸಿಲ್ಲ. ನೆಹರು, ಇಂದಿರಾಗಾಂಧಿ, ರಾಜೀವ್‍ಗಾಂಧಿ ದೇಶದ ಪ್ರಧಾನಿಯಾಗಿದ್ದರು. ಈಗ ರಾಹುಲ್‍ಗಾಂಧಿ ಪ್ರಧಾನಿಯಾಗಲು ಹೊರಟಿದ್ದಾರೆ ಎಂದರು.
ಕುಟುಂಬ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‍ನಿಂದ ದೇಶಕ್ಕೆ ಭವಿಷ್ಯವಿಲ್ಲ. ನಮ್ಮ ಪಕ್ಷ ಒಂದು ಕುಟುಂಬಕ್ಕೆ ಸೀಮಿತವಾಗಿಲ್ಲ. ಸಾಮಾನ್ಯ ಕಾರ್ಯಕರ್ತನಿಗೂ ಅಧಿಕಾರ ನೀಡುತ್ತದೆ. ಹಾಗಾಗಿ ಬಿಜೆಪಿ. ನಂಬರ್ ಒನ್ ಪಾರ್ಟಿ ಎಂದು ಹರ್ಷ ವ್ಯಕ್ತಪಡಿಸಿದರು.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಜೊತೆ ZP-TP ಚುನಾವಣೆ | ಸರ್ಕಾರದ ಚಿಂತನೆ
ಪ್ರಧಾನಿ ನರೇಂದ್ರ ಮೋದಿ ಅವರು ಪ್ರಪಂಚವೆ ಭಾರತದತ್ತ ತಿರುಗಿ ನೋಡುವಂತೆ ಕೆಲಸ ಮಾಡುತ್ತಿದ್ದಾರೆ. ಸದಸ್ಯತ್ವಕ್ಕಾಗಿ ಕಾರ್ಯಕರ್ತರು ಪಕ್ಷದಲ್ಲಿಲ್ಲ. ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಹೈಕಮಾಂಡ್ ಎಂದರೆ ಕಾಂಗ್ರೆಸ್. ನಮ್ಮಲ್ಲಿ ರಾಷ್ಟ್ರೀಯ ಅಧ್ಯಕ್ಷರೆ ಹೈಕಮಾಂಡ್. ಹಾಗಾಗಿ ಕಾಂಗ್ರೆಸ್‍ಗೂ ಬಿಜೆಪಿಗೂ ತುಲನೆ ಮಾಡಿ ನೋಡಬೇಕಿದೆ ಎಂದರು.
ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ನಮ್ಮ ಪ್ರಧಾನಿ ನರೇಂದ್ರಮೋದಿ ಅವರು ಭಾರತವನ್ನು ವಿಶ್ವಗುರುವನ್ನಾಗಿ ಮಾಡಿರುವುದರಿಂದ ಪ್ರಪಂಚವೇ ನಮ್ಮ ದೇಶದತ್ತ ತಿರುಗಿ ನೋಡುವಂತಾಗಿದೆ ಎಂದರು.
ಇದನ್ನೂ ಓದಿ: ನವೋದಯ ವಿದ್ಯಾಲಯ | ಫೆಬ್ರವರಿ 07ಕ್ಕೆ ಪ್ರವೇಶ ಪರೀಕ್ಷೆ
ನಾನು ವಿರೋಧ ಪಕ್ಷದಲ್ಲಿದ್ದರು ಅನುದಾನ ಹೇಗೆ ತರಬೇಕೆಂಬ ಗಡಸು ಇಟ್ಟುಕೊಂಡಿರುವುದರಿಂದ ನಿತ್ಯವೂ ಒಂದಲ್ಲ ಒಂದು ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿವೆ. ರೈತರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದೇನೆ. ತಾಲ್ಲೂಕಿನಾದ್ಯಂತ ಕೆರೆಗಳನ್ನು ತುಂಬಿಸಲಾಗುವುದು. ಅಡಿಕೆ ತೋಟಗಳು ಒಣಗಬಾರದೆಂದು ವಿದ್ಯುತ್ ಪವರ್ ಸ್ಟೇಷನ್‍ಗಳನ್ನು ಕಟ್ಟಿಸುತ್ತಿದ್ದೇನೆ. ಹಿರಿಯೂರಿನ ವಾಣಿವಿಲಾಸಸಾಗರದಿಂದ ಶುದ್ದವಾದ ಕುಡಿಯುವ ನೀರು ಪ್ರತಿ ಮನೆಗಳಿಗೆ ಪೂರೈಸಲಾಗುವುದು. ಎಲ್ಲಾ ಕಡೆ ಸಿ.ಸಿ.ರಸ್ತೆಗಳನ್ನು ಮಾಡಿಸಿದ್ದೇನೆ. ಹೊಳಲ್ಕೆರೆ ಮಂಡಲ ನೂತನ ಅಧ್ಯಕ್ಷರು ಕಾರ್ಯಕರ್ತರನ್ನು ಪ್ರೀತಿ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಬಲಪಡಿಸುವಂತೆ ಸೂಚಿಸಿದರು.
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಅಧಿಕಾರ ಹಿಡಿಯಬೇಕಾಗಿರುವುದರಿಂದ ಕಾರ್ಯಕರ್ತರು ಈಗಿನಿಂದಲೇ ಸಿದ್ದರಾಗಬೇಕು.
| ಡಾ.ಎಂ.ಚಂದ್ರಪ್ಪ, ಹೊಳಲ್ಕೆರೆ ಶಾಸಕರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಹೊಳಲ್ಕೆರೆ ಮಂಡಲ ನೂತನ ಅಧ್ಯಕ್ಷ ಡಿ.ಬಿ.ಕುಮಾರಣ್ಣ, ಭರಮಸಾಗರ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಮಾಜಿ ಮಂಡಲ ಅಧ್ಯಕ್ಷ ಸಿದ್ದೇಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ರೈತ ಮೋರ್ಚ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಅನಿತ್‍ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಮಹೇಶಣ್ಣ, ತಿಪ್ಪೇಸ್ವಾಮಿ, ಪಾರ್ವತಮ್ಮ, ಪುರಸಭೆ ಮಾಜಿ ಸದಸ್ಯರಾದ ಆರ್.ಎ.ಅಶೋಕ್, ಮುರುಗೇಶ್, ಮಲ್ಲಿಕಾರ್ಜುನ್, ಬಸವರಾಜ್ ಯಾದವ್, ದೇವರಾಜ್, ಜಗದೀಶ್, ಲವಕುಮಾರ್, ಮಾರುತೇಶ್, ಸರಸ್ವತಿ, ರುದ್ರಮ್ಮ, ರೂಪ ಸುರೇಶ್, ಡಿ.ಸಿ.ಮೋಹನ್ ಇತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
