
CHITRADURGA NEWS | 22 JANUARY 2026
ಚಿತ್ರದುರ್ಗ: ವಿವಿಧ ಕಾರ್ಮಿಕ ಕಾಯ್ದೆಗಳ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೈಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ಉದ್ಯೋಗದಾತರು ಒದಗಿಸಬೇಕು ಎಂದು ಕಲಬುರಗಿ ಪ್ರಾದೇಶಿಕ ವಿಭಾಗದ ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ ಅ.ಶಿಂದಿಹಟ್ಟಿ ತಿಳಿಸಿದ್ದಾರೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಜೊತೆ ZP-TP ಚುನಾವಣೆ | ಸರ್ಕಾರದ ಚಿಂತನೆ

ಕಾರ್ಖಾನೆಗಳ ಕಾಯ್ದೆ 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961, ತೋಟ ಕಾರ್ಮಿಕರ ಕಾಯ್ದೆ 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ 1966 ಮತ್ತು ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ 1961ರಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ಕಾರ್ಮಿಕರಿಗೆ ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸುವಂತೆ ಸರ್ಕಾರವು ಆದೇಶಿಸಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 21 ಜನವರಿ | ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು ಮತ್ತು ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂದು ಕಲಬುರಗಿ ಪ್ರಾದೇಶಿಕ ವಿಭಾಗದ ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ ಅ.ಶಿಂದಿಹಟ್ಟಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
