
CHITRADURGA NEWS | 29 DECEMBER 2025
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಗೊಡಬನಾಳು ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿರುವ 66/11ಕೆವಿ ಗೊಡಬನಾಳು ವಿದ್ಯುತ್ ವಿತರಣಾ ಕೇಂದ್ರಕ್ಕೆ ಹಾಲಿ ಇರುವ ಹೊಳಲ್ಕೆರೆ-ಪಂಡರಹಳ್ಳಿ 66ಕೆವಿ ಮಾರ್ಗದಿಂದ 4.918 ಕಿಮೀ ಉದ್ದದ 66ಕೆವಿ ಜೋಡಿ ಮಾರ್ಗ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡಿರುತ್ತದೆ. ಇದೇ ಡಿಸೆಂಬರ್ 30ರಿಂದ ಈ ಮಾರ್ಗದಲ್ಲಿ ವಿದ್ಯುತ್ ಪ್ರಸರಣ ಚಾಲನೆಗೊಳ್ಳಲಿದೆ.
ಇದನ್ನೂ ಓದಿ: ಕುವೆಂಪು ಜೀವನ ಮೌಲ್ಯಗಳು ಸದಾ ಪ್ರಸ್ತುತ | ಮೆಹಬೂಬ್ ಜಿಲಾನಿ ಖುರೇಷಿ

ಈ ಮಾರ್ಗದ ವಿದ್ಯುತ್ ಗೋಪುರಗಳನ್ನು ಮುಟ್ಟುವುದಾಗಲಿ, ಹತ್ತುವುದಾಗಲಿ, ಮರದ ರೆಂಬೆ,ಲೋಹದ ತಂತಿಗಳನ್ನು ಹಾಗೂ ಇತರೆ ಯಾವುದೇ ವಸ್ತುಗಳನ್ನು ಮಾರ್ಗದ ಮೇಲೆ ಎಸೆಯುವುದಾಗಲಿ ಮತ್ತು ವಿದ್ಯುತ್ ಗೋಪುರಗಳಿಗೆ ಜಾನುವಾರುಗಳನ್ನು ಕಟ್ಟುವುದಾಗಲಿ ಮಾಡಬಾರದೆಂದು ಸಾರ್ವಜನಿಕಗೆ ಎಚ್ಚರಿಕೆ ನೀಡಲಾಗಿದೆ.
ಈಗಾಗಲೇ ಈ ಮಾರ್ಗದಲ್ಲಿ ಅಪಾಯದ ಮಟ್ಟದಲ್ಲಿರುವ ಮರಗಳನ್ನು ಸುರಕ್ಷತೆ ದೃಷ್ಟಿಯಿಂದ ತೆಗೆದು ಹಾಕಿ, ನಿಗಮದ ನಿಯಾಮನುಸಾರ ಸೂಕ್ತ ಪರಿಹಾರ ಪಡೆದುಕೊಳ್ಳಲು ಭೂ ಮಾಲೀಕರಿಗೆ ತಿಳಿಸಲಾಗಿದೆ. ಒಂದು ವೇಳೆ ಇದುವರೆಗೂ ಮರಗಳನ್ನು ತೆಗೆಯದೇ ಇದ್ದರೆ ಕೂಡಲೇ ಮರಗಳನ್ನು ತೆರವುಗೊಳಿಸಬೇಕು.
ಎಚ್ಚರಿಕೆ ಉಲ್ಲಂಘಿಸಿ ವಿದ್ಯುತ್ ಮಾರ್ಗದಿಂದ ಸಾರ್ವಜನಿಕರಿಗೆ ಹಾನಿ, ತೊಂದರೆ, ಅಪಘಾತಗಳು ಉಂಟಾದರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಯಾವುದೇ ರೀತಿಯಲ್ಲಿ ಜವಾಬ್ದಾರಿಯಾಗಿರುವುದಿಲ್ಲ.
ಇದನ್ನೂ ಓದಿ: ವರ್ಷಾಂತ್ಯಕ್ಕೆ ಏರಿಕೆ ಕಂಡ ಅಡಿಕೆ ಬೆಲೆ
ಗೊಡಬನಾಳು ಮತ್ತು ಬಂಜಗೊಂಡನಹಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಮಾರ್ಗ ಹಾದುಹೋಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಯೋಜನೆಗಳ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
