CHITRADURGA NEWS | 05 OCTOBER 2024
ಚಿತ್ರದುರ್ಗ: ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿ(Shri Jayadeva swamiji)ಗಳ150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವ 2024ರ ಅಂಗವಾಗಿ ಶ್ರೀ ಜಯದೇವ ಕಪ್ ಪಂದ್ಯಾವಳಿಯ ನಿಮಿತ್ತ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿ ಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನಕ್ಕೆ ಶನಿವಾರ ಸಂಸದ ಗೋವಿಂದ ಕಾರಜೋಳ(Govinda karajola) ಚಾಲನೆ ನೀಡಿದರು.ಜಯದೇವ ಶ್ರೀಗಳ
ಕ್ಲಿಕ್ ಮಾಡಿ ಓದಿ: Rain Report; ನಾಯಕನಹಟ್ಟಿಯಲ್ಲಿ 91.5 ಮಿ.ಮೀ ಮಳೆ | ತುಂಬಿ ಹರಿದ ಹಳ್ಳಗಳು
ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನವು ಬಸವಮಂಟಪ ರಸ್ತೆಯಿಂದ ಪ್ರಾರಂಭವಾಗಿ ರಂಗಯ್ಯನ ಬಾಗಿಲು, ದೊಡ್ಡಪೇಟೆ, ಚಿಕ್ಕಪೇಟೆ, ಬುರುಜಿನ ಹಟ್ಟಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ನೀಲಕಂಠೇಶ್ವರ ದೇವಸ್ಥಾನ, ಗಾಂಧಿ ವೃತ್ತ, ಬಿ.ಡಿ.ರಸ್ತೆ ಮೂಲಕ ಹಳೆಯ ಮಾಧ್ಯಮಿಕ ಶಾಲಾ ಆವರಣ ತಲುಪಿತು.
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ್, ಆಡಳಿತ ಮಂಡಳಿ ಸದಸ್ಯರಾದ ಡಾ.ಶ್ರೀ.ಬಸವಕುಮಾರ ಸ್ವಾಮಿಗಳು, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳು, ದಾವಣಗೆರೆ ವಿರಕ್ತಮಠದ ಶ್ರೀ.ಬಸವಪ್ರಭು ಸ್ವಾಮಿಗಳು, ವನಕಲ್ ಮಠದ ಡಾ. ಶ್ರೀ.ಬಸವ ರಮಾನಂದ ಸ್ವಾಮಿಗಳು, ಗುರುಮಠಕಲ್ ಖಾಸಾ ಶ್ರೀ ಮುರುಘಾಮಠದ ಶ್ರೀಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು, ಬಸವಮೂರ್ತಿ ಶ್ರೀ ಕುಂಬಾರ ಗುಂಡಯ್ಯ ಸ್ವಾಮಿಗಳು, ಚಿಗರಹಳ್ಳಿ ಶ್ರೀ ಮರುಳಶಂಕರದೇವ ಗುರುಪೀಠದ ಶ್ರೀ ಸಿದ್ಧಬಸವ ಕಬೀರ ಸ್ವಾಮಿಗಳು, ಉಳವಿ ಶ್ರೀ. ಬಸವಲಿಂಗಮೂರ್ತಿ ಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಶಿವಾನಂದ ಸ್ವಾಮಿಗಳು, ಶ್ರೀ ಬಸವ ಚೇತನ ಸ್ವಾಮಿಗಳು, ಶಿಕಾರಿಪುರದ ಶ್ರೀ ಚನ್ನಬಸವ ಸ್ವಾಮಿಗಳು, ಡಿ.ಕಲ್ಕೆರೆ ಶ್ರೀ.ತಿಪ್ಪೇರುದ್ರಸ್ವಾಮಿಗಳು, ಮುಖಂಡರಾದ ಕೆ.ಸಿ.ನಾಗರಾಜ್, ಪಟೇಲ್ ಶಿವಕುಮಾರ್, ಕೆ.ಇ.ಬಿ. ಷಣ್ಮುಖಪ್ಪ, ಎಸ್.ಎಂ.ಎಲ್.ತಿಪ್ಪೇಸ್ವಾಮಿ, ಗೊಪ್ಪೆ ಮಂಜುನಾಥ್, ಸಿದ್ದಾಪುರ ನಾಗಣ್ಣ, ಮೋಕ್ಷಾ ರುದ್ರಸ್ವಾಮಿ, ರುದ್ರಾಣ ಗಂಗಾಧರ್ ಸೇರಿದಂತೆ ಇತರರು ಜಾಥದಲ್ಲಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number