Connect with us

    PDO ನೇಮಕಾತಿಗೆ ಪರೀಕ್ಷೆ | ಅಗತ್ಯ ಸಿದ್ಧತೆ ಪೊಲೀಸರ ನಿಯೋಜನೆಗೆ ಸೂಚನೆ

    pdo exam meating

    ಮುಖ್ಯ ಸುದ್ದಿ

    PDO ನೇಮಕಾತಿಗೆ ಪರೀಕ್ಷೆ | ಅಗತ್ಯ ಸಿದ್ಧತೆ ಪೊಲೀಸರ ನಿಯೋಜನೆಗೆ ಸೂಚನೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 03 DECEMBER 2024

    ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‍ಸಿ) ವತಿಯಿಂದ ಡಿಸೆಂಬರ್ 07 ಮತ್ತು 08 ರಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

    ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ತಪಾಸಣೆಗೆ ಅನುಕೂಲವಾಗುವಂತೆ ಹೆಚ್ಚುವರಿ ಪೊಲೀಸರನ್ನು ನೇಮಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ | ಜಿಲ್ಲಾಧಿಕಾರಿ ಆದೇಶ

    ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು

    ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಅಡಗಿದೆ. ಯಾವುದೇ ಗೊಂದಲ ಹಾಗೂ ಅಕ್ರಮಗಳಿಗೆ ಎಡೆ ಮಾಡಿಕೊಡದಂತೆ ಪರೀಕ್ಷಾ ಕಾರ್ಯ ನಡೆಸಬೇಕು. ಪರೀಕ್ಷಾ ಸಂಬಂಧ ಕೆಪಿಎಸ್‍ಸಿ ನೀಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.

    ಇದನ್ನೂ ಓದಿ: ಕಾನೂನು ಕಾಲೇಜುಗಳ ಚೆಸ್ ಸ್ಪರ್ಧೆ | ಬೆಂಗಳೂರು, ಹುಬ್ಬಳ್ಳಿ ತಂಡಗಳಿಗೆ ಪ್ರಶಸ್ತಿಯ ಗರಿ

    ಮೊಬೈಲ್, ಬ್ಲೂಟೂತ್ ಮತ್ತು ಆಧುನಿಕ ಸಂವಹನದ ಉಪಕರಣ ಬಳಸಿ ಪರೀಕ್ಷಾ ಅಕ್ರಮ ಮಾಡುವುದನ್ನು ತಡೆಯಲು ಅಭ್ಯರ್ಥಿಗಳನ್ನು ಸಂಪೂರ್ಣವಾಗಿ ತಪಾಸಣೆ ನಡೆಸಬೇಕು. KPSC ವತಿಯಿಂದ ತಪಾಸಣೆಗೆ ವ್ಯಕ್ತಿಗಳನ್ನು ನಿಯೋಜನೆ ಮಾಡುವುದಾಗಿ ತಿಳಿಸಿದ್ದಾರೆ.

    ಆದಾಗ್ಯೂ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ತಪಾಸಣೆಗಾಗಿ ಪ್ರತ್ಯೇಕ ತಂಡ ರಚಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಮಹಿಳಾ ಅಭ್ಯರ್ಥಿಗಳ ತಪಾಸಣೆಗೆ ಅನುಕೂಲವಾಗುವಂತೆ ಹೆಚ್ಚುವರಿ ಮಹಿಳಾ ಪೊಲೀಸರನ್ನು ತಪ್ಪದೇ ನೇಮಿಸಬೇಕು.

    ಅಕ್ರಮ ತಡೆಗೆ ಜಾಮರ್, ಸಿಸಿ ಕ್ಯಾಮರಾ:

    ಅಕ್ರಮ ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಹಾಗೂ ಪರೀಕ್ಷಾ ನಡೆಯುವ ಕೊಠಡಿಗಳಲ್ಲಿ ಸಿ.ಸಿ.ಟಿ.ವಿ ಈಗಾಗಲೇ ಅಳವಡಿಸಲು ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಜಾಮರ್, ಸಿ.ಸಿ.ಟಿ.ವಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶಿಸಿದರು.

    ಇದನ್ನೂ ಓದಿ: ಮುರುಘಾ ಮಠದಲ್ಲಿ ಜ್ಞಾನ ದೀಪೋತ್ಸವ | ದೀಪಾರತಿ, ಪುಷ್ಪಾರ್ಚನೆ ಮಾಡಿ ಭಕ್ತಿ ಸಮರ್ಪಣೆ

    ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಇದಕ್ಕೆ ಪೂರಕವಾಗಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗುವುದು. ಖಜಾನೆ ಅಧಿಕಾರಿ, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕು ಪ್ರಶ್ನೆಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.

    ಪರೀಕ್ಷಾ ಕೇಂದ್ರದಲ್ಲಿ ಹೆಲ್ತ್ ಸ್ಕ್ರೀನಿಂಗ್ ಕೌಂಟರ್ ಸ್ಥಾಪಿಸಿ, ಆರೋಗ್ಯ ತಪಾಸಣೆಗಾಗಿ ಆರೋಗ್ಯ ಸಹಾಯಕರನ್ನು ನಿಯೋಜಿಸಬೇಕು. ಪರೀಕ್ಷಾ ಕಾರ್ಯ ಮುಗಿದ ನಂತರ ಉತ್ತರ ಪತ್ರಿಕೆಗಳ ಬಂಡಲ್‍ಗಳನ್ನು ಅಂಚೆ ಕಚೇರಿಯ ಮೂಲಕ ಆಯೋಗಕ್ಕೆ ಸುರಕ್ಷಿತವಾಗಿ ತಲುಪಿಸಬೇಕು.

    ಇದನ್ನೂ ಓದಿ:  ರೈತ ಉತ್ಪಾದಕ ಸಂಸ್ಥೆಗಳಿಂದ ಮೈಸೂರು ಕಿಸಾನ್ ಮಾಲ್ ಸ್ಥಾಪನೆ

    ಪರೀಕ್ಷೆ ಶನಿವಾರ ಹಾಗೂ ಭಾನುವಾರ ನಡೆಯುವುದರಿಂದ ಎಲ್ಲಾ ಪರೀಕ್ಷಾ ಕೇಂದ್ರಗಳ ಬಳಿ ಇರುವ ಅಂಚೆ ಕೆಚೇರಿಯಗಳನ್ನು ತೆರೆದು, ಬಂಡಲ್‍ಗಳನ್ನು ಸ್ವೀಕರಿಸಬೇಕು ಎಂದು ಜಿಲ್ಲಾಧಿಕಾರಿ ಅಂಚೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    40 ಪರೀಕ್ಷಾ ಕೇಂದ್ರ : 14614 ಅಭ್ಯರ್ಥಿಗಳು

    ಜಿಲ್ಲೆಯ ಚಿತ್ರದುರ್ಗ ಹಾಗೂ ಚಳ್ಳಕೆರೆ ನಗರದ 40 ಕೇಂದ್ರಗಳಲ್ಲಿ ಪಿಡಿಓ ನೇಮಕಾತಿ ಪರೀಕ್ಷೆ ನಡೆಯಲಿದ್ದು, ಒಟ್ಟು 14614 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

    ಇದನ್ನೂ ಓದಿ: ಕುರಿ, ಮೇಕೆ ಪೂರೈಕೆ ಯೋಜನೆ | ಪರಿಶಿಷ್ಟ ಪಂಗಡದ ಸದಸ್ಯರಿಂದ ಅರ್ಜಿ ಆಹ್ವಾನ

    ಡಿಸೆಂಬರ್ 7ರಂದು ಮಧ್ಯಾಹ್ನ 2 ರಿಂದ 4 ಗಂಟೆ ರವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಡಿ.8 ರಂದು ಬೆಳಿಗ್ಗೆ 10 ಗಂಟೆಯಿಂದ 11:30 ವರೆಗೆ ಪತ್ರಿಕೆ-1ರ ಸಾಮಾನ್ಯ ಜ್ಞಾನ ಹಾಗೂ ಮಧ್ಯಾಹ್ನ 2 ರಿಂದ 4 ಗಂಟೆ ರವರೆಗೆ ಪತ್ರಿಕೆ-2ರ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ವಿಷಯಗಳ ಪರೀಕ್ಷೆಯು ನಡೆಯಲಿದೆ.

    ಮಾರ್ಗಾಧಿಕಾರಿಗಳು, ಸೂಕ್ಷ್ಮ ವೀಕ್ಷಕರನ್ನು ಪರೀಕ್ಷಾ ಕೇಂದ್ರಗಳಿಗೆ ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೂ ಈಗಾಗಲೇ ಎಲ್ಲಾ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಸಭೆಯಲ್ಲಿ ಮಾಹಿತಿ ನೀಡಿದರು.

    ಇದನ್ನೂ ಓದಿ: ಸಿಟಿ ಇನ್ಸ್ಟಿಟ್ಯೂಟ್(City club) ಚುನಾವಣೆ | ನಿರ್ದೇಶಕರ ಫಲಿತಾಂಶ ಪ್ರಕಟ 

    ಚಳ್ಳಕೆರೆ ತಹಶೀಲ್ದಾರ್ ರೆಹಮಾನ್ ಪಾಷ, ಡಿವೈಎಸ್‍ಪಿ ದಿನಕರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಜಿಲ್ಲಾ ಖಜನಾಧಿಕಾರಿ, ಅಂಚೆ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಸಬೆಯಲ್ಲಿ ಭಾಗವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top