Connect with us

    ರೈತರಿಂದ ಪಂಜಿನ ಮೆರವಣಿಗೆ | ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗೆ ಧಿಕ್ಕಾರ

    ಮುಖ್ಯ ಸುದ್ದಿ

    ರೈತರಿಂದ ಪಂಜಿನ ಮೆರವಣಿಗೆ | ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗೆ ಧಿಕ್ಕಾರ

    ಚಿತ್ರದುರ್ಗ:
    ಭದ್ರ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5300 ಕೋಟಿ ರೂಗಳನ್ನು ಘೋಷಿಸಿ ಇದುವರೆಗೂ ಹಣ ಬಿಡುಗಡೆಗೊಳಿಸದೆ ರೈತರನ್ನು ನಿರ್ಲಕ್ಷೆಯಿಂದ ಕಾಣುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅಖಂಡ ಕರ್ನಾಟಕ ರೈತ ಸಂಘ, ವಿವಿಧ ಜನಪರ ಸಂಘಟನೆಗಳಿಂದ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗೆ ಧಿಕ್ಕಾರ ಕೂಗಿದರು.

    ಇದನ್ನೂ ಓದಿ: ಸಂಗಮೇಶ್ವರ ಜಯಂತಿ ಸರಳ ಆಚರಣೆ | ಕುಂಚಿಟಿಗ ಮಠದ ಶ್ರೀ ಶಾಂತವೀರ ಮಹಾ ಸ್ವಾಮೀಜಿ

    ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಪ್ರಾರಂಭವಾದ ಪಂಜಿನ ಮೆರವಣಿಗೆ ಲಕ್ಷ್ಮಿ ಬಜಾರ್,ಗಾಂಧಿ ವೃತ್ತ,ಸಂತೆ ಹೊಂಡ ರಸ್ತೆ, ಎಸ್ ಬಿ ಎಂ ವೃತ್ತ, ಒನಕೆ ಓಬವ್ವ ವೃತ್ತದ ಮೂಲಕ ಜಿಲ್ಲಾ ಪಂಚಾಯತ್ ತಲುಪಿತು.

    ಪಂಜಿನ ಮೆರವಣಿಗೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯದರ್ಶಿ ಈಚೆಗಟ್ಟದ ಸಿದ್ಧವೀರಪ್ಪ ಮಾತನಾಡಿ, ಮಧ್ಯ ಕರ್ನಾಟಕದ ಬಯಲು ಸೀಮೆ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆಯನ್ನು ಜಾರಿಗೊಳಿಸುವಂತೆ ಕಳೆದ 25 ಮತ್ತು 30 ವರ್ಷಗಳಿಂದಲೂ ಹೋರಾಟ ಮಾಡಲಾಗುತ್ತಿದೆ, ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡನೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ 5300 ಕೋಟಿ ರೂಗಳನ್ನು ಮಂಜೂರು ಮಾಡಿದಿಯೇ ವಿನಹ ಬಿಡುಗಡೆಗೊಳಿಸಿಲ್ಲ, ಇದರಿಂದ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿದೆ, ಲೋಕಸಭೆ ಚುನಾವಣೆ ಒಳಗಾಗಿ ಕೇಂದ್ರ ಸರ್ಕಾರ ಹಣ ಬಿಡುಗಡೆಗೊಳಿಸಿ ಕಾಮಗಾರಿಗೆ ಚುರುಕು ನೀಡಿ ಆದಷ್ಟು ಬೇಗನೆ ಜಿಲ್ಲೆಗೆ ನೀರು ಹರಿಸಬೇಕು, ಇಲ್ಲವಾದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಲಾಗುವುದೆಂದು ಎಚ್ಚರಿಕೆ ನೀಡಿದರು.

    ಇದನ್ನೂ ಓದಿ: ಚಿತ್ರದುರ್ಗದ ಟಿ.ಸುಮಾ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ | ಅಪ್ಪ ಆಟೋ ಡ್ರೈವರ್ ಮಗಳು ಜಡ್ಜ್ | ಅಪರೂಪದ ಸಾಧನೆಗೆ ಕೋಟೆನಾಡು ಸಾಕ್ಷಿ

    ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಡಿ. ಎಸ್. ಹಳ್ಳಿ, ತಾಲೂಕು ಅಧ್ಯಕ್ಷ ಮಂಜುನಾಥ್, ರಾಜಣ್ಣ, ಹರಳಯ್ಯ, ಕರ್ನಾಟಕ ಜನಶಕ್ತಿಯ ಶಫಿವುಲ್ಲಾ ಸೇರಿದಂತೆ ರೈತ ಮುಖಂಡರುಗಳಾದ ನಾಗರಾಜ್ ರೆಡ್ಡಿ, ಲೋಕಣ್ಣ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಸುರೇಶ್ ಬಾಬು ಮುಂತಾದವರು ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top