
CHITRADURGA NEWS | 12 July 2025
ಚಿತ್ರದುರ್ಗ: ಪೋಷಕರು ಮಕ್ಕಳ ಆಸಕ್ತಿಗನುಗುಣವಾಗಿ ಪ್ರೋತ್ಸಾಹಿಸಿ, ಬೆಂಬಲಿಸಿದಾಗ ಅವರು ಉನ್ನತ ಮಟ್ಟದ ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಪಿಳ್ಳಕೆರೆನಹಳ್ಳಿಯಲ್ಲಿರುವ ಎಸ್.ಆರ್.ಎಸ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಾಧಕ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಒಂದು ಕಾಲದಲ್ಲಿ ಅನ್ನದಾನ ಶ್ರೇಷ್ಟದಾನವೆಂದು ಹೇಳಲಾಗುತ್ತಿತ್ತು. ದಿನ ಕಳೆದಂತೆ ಈಗ ವಿದ್ಯೆದಾನ ಎಲ್ಲಾ ದಾನಕ್ಕಿಂತ ಮಿಗಿಲಾದುದ್ದು.ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಎಸ್.ಆರ್.ಎಸ್. ಸಂಸ್ಥೆಯ ಕೀರ್ತಿ ಗೌರವವನ್ನು ಹೆಚ್ಚಿಸಿ ತಮ್ಮಲ್ಲಿರುವ ಸಾಮಥ್ರ್ಯವನ್ನು ಹೊರಸೂಸಿದ್ದಾರೆ ಎಂದರು.
ಎಸ್.ಆರ್.ಎಸ್. ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಸಾಧಕರನ್ನು ಮಾದರಿಯಾಗಿರಿಸಿಕೊಂಡು ಮುಂದೆ ನೀವುಗಳು ಇಂತಹ ಸನ್ಮಾನಕ್ಕೆ ಭಾಜನರಾದಾಗ ಹೆತ್ತ ತಂದೆ-ತಾಯಿಗಳು ಹಾಗೂ ಗುರು-ಹಿರಿಯರಿಗೆ ಎಲ್ಲಿಲ್ಲದ ಸಂತೋಷವೆನಿಸುತ್ತದೆ. ನಗರ ಮತ್ತು ಗ್ರಾಮೀಣ ಮಕ್ಕಳೆಂಬ ತಾರತಮ್ಯ ಬೇಡ. ಪ್ರತಿಯೊಬ್ಬರಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆಯಿರುತ್ತದೆ. ಗುರುತಿಸಿ ಬೆಳಕಿಗೆ ತಂದಾಗ ಇಂತಹ ಸಾಧನೆ ಮಾಡಬಹುದು ಎಂದು ತಿಳಿಸಿದರು.
ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಆರ್.ಎಸ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿ, ಪ್ರತಿ ವರ್ಷವೂ ಸಾಧಕ ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಿ ಸನ್ಮಾನಿಸುತ್ತಿದ್ದೇವೆ. ಇದರಿಂದ ಬೇರೆ ವಿದ್ಯಾರ್ಥಿಗಳಿಗೆ ಉತ್ತೇಜನ ಮೂಡಿಸಿದಂತಾಗುತ್ತದೆ. ಕಠಿಣ ಪರಿಶ್ರಮ, ಶ್ರದ್ದೆಯಿಂದ ಓದಿದಾಗ ಸ್ಪರ್ಧಾತ್ಮಕ ಯುಗದಲ್ಲಿ ದೊಡ್ಡ ದೊಡ್ಡ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಾಧ್ಯ ಎಂದು ಹೇಳಿದರು.
ಈ ವೇಳೆ ವಾಗ್ಮಿ ಅಶೋಕ್ ಹಂಚಲಿ ಮಾತನಾಡಿದರು.
2025 ನೇ ಸಾಲಿನ ನೀಟ್, ಜೆಇಇ ಬೋರ್ಡ್ ಪರೀಕ್ಷೆಗಳಲ್ಲಿ ಅತಿ ಹೆಚ್ಚಿನ ಅಂಕಗಳಿಸಿರುವ ಕೆ.ಪಿ.ಪೂಜಿತ್ ಕುಲಾಲ್, ಆನಂದ್, ಅಮರೇಶ್, ಇಶಿತಾ ಹಾಗೂ ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಎಸ್.ಆರ್.ಎಸ್. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಬಿ.ಎಲ್.ಅಮೋಘ್, ಚಳ್ಳಕೆರೆ ಎಸ್.ಆರ್.ಎಸ್. ಪಿ.ಯು.ಕಾಲೇಜು ಪ್ರಾಂಶುಪಾಲರಾದ ಸತ್ಯನಾರಾಯಣ ಸೇರಿದಂತೆ ಇತರರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
