ನಿಧನವಾರ್ತೆ
ಎಂ.ಮಲ್ಲಿಕಾರ್ಜುನಪ್ಪ
ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ಜಿಲ್ಲಾಧ್ಯಕ್ಷರು ಹಾಗೂ ಅಂಚೆ ಇಲಾಖೆ ನಿವೃತ್ತ ಹೆಡ್ ಪೋಸ್ಟ್ ಮಾಸ್ಟರ್ ಆಗಿದ್ದ ಎಂ.ಮಲ್ಲಿಕಾರ್ಜುನಪ್ಪ ಮಂಗಳವಾರ ಸಂಜೆ ನಿಧನರಾಗಿದ್ದಾರೆ.
ಮೃತರು ಅಮೇರಿಕಾದಲ್ಲಿ ನೆಲೆಸಿರುವ ಪುತ್ರರಾದ ಭರತ್ ಹಾಗೂ ಲೋಹಿತ್ ಹಾಗೂ ಪತ್ನಿ ನಾಗರತ್ನಮ್ಮ ಅವರನ್ನು ಅಗಲಿದ್ದಾರೆ. ಹಿರಿಯೂರು ತಾಲೂಕು ಚಿಕ್ಕಸಿದ್ದವ್ವನಹಳ್ಳಿ ಮೂಲದ ಮಲ್ಲಿಕಾರ್ಜುನಪ್ಪ, ಅಂಚೆ ಇಲಾಖೆ ನಿವೃತ್ತ ನೌಕರರ ಸಂಘಟನೆಯ ರಾಜ್ಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಕಳೆದ ಹಲವು ವರ್ಷಗಳಿಂದ ಚಿತ್ರದುರ್ಗ ಜಿಲ್ಲಾ ಪತಂಜಲಿ ಯೋಗ ಸಮಿತಿ ಅಧ್ಯಕ್ಷರಾಗಿ ಹಲವು ಯೋಗ ಶಾಖೆಗಳನ್ನು ತೆರೆದಿದ್ದರು.
ನಗರದ ಕೆಎಚ್‍ಬಿ ಕಾಲೋನಿ 3ನೇ ಹಂತ, 9ನೇ ಕ್ರಾಸ್‍ನಲ್ಲಿರುವ ನಿವಾಸದಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಯಿಂದ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಸ್ವಗ್ರಾಮ ಚಿಕ್ಕಸಿದ್ದವ್ವನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮೃತರ ಕುಟುಂಬದ ಮೂಲಗಳು ತಿಳಿಸಿವೆ.
(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ https://www.facebook.com/chitradurganews?mibextid=ZbWKwL)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
