ಮುಖ್ಯ ಸುದ್ದಿ
PDO suspended: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮಾನತು | ಕರ್ತವ್ಯ ಲೋಪದ ಆರೋಪ

Published on
CHITRADURGA NEWS | 20 AUGUST 2024
ಚಿತ್ರದುರ್ಗ: ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ ಹಾಗೂ ಕರ್ತವ್ಯ ಲೋಪ ಎಸಗಿದ ಆರೋಪದಡಿ ಚಿತ್ರದುರ್ಗ ತಾಲ್ಲೂಕಿನ ಕಾಲಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಬಸವರಾಜ್ ಅವರನ್ನು ಅಮಾನತುಗೊಳಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಏರಿಕೆಯಾಗುತ್ತಿದೆ ವಿವಿ ಸಾಗರ ಜಲಾಶಯ ಮಟ್ಟ | ಹೆಚ್ಚುತ್ತಿದೆ ಒಳಹರಿವು
ಬಸವರಾಜ್ ಅವರು ಹಿರಿಯೂರು ತಾಲ್ಲೂಕಿನ ಯರಬಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಆಗಿದ್ದಾಗ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದರು. ಕರ್ತವ್ಯ ಲೋಪ ಎಸಗಿದ ಆರೋಪಕ್ಕೆ ಗುರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.

ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಿದ್ದಾರೆ.
Continue Reading
Related Topics:Allegation, Dereliction of Duty, Development, Hiriyur, Officer, Suspension, Village Panchayat, Yaraballi, ಅಧಿಕಾರಿ, ಅಭಿವೃದ್ಧಿ, ಅಮಾನತು, ಆರೋಪ, ಕರ್ತವ್ಯ ಲೋಪ, ಗ್ರಾಮ ಪಂಚಾಯಿತಿ, ಯರಬಳ್ಳಿ, ಹಿರಿಯೂರು

Click to comment