ಚಳ್ಳಕೆರೆ
ಕರ್ತವ್ಯಕ್ಕೆ ಗೈರು | PDO ಅಮಾನತು | ಜಿಪಂ ಸಿಇಓ ಆದೇಶ
CHITRADURGA NEWS | 29 NOVEMBER 2024
ಚಳ್ಳಕೆರೆ: ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗುತ್ತಿದ್ದ ಚಳ್ಳಕೆರೆ ತಾಲೂಕಿನ ಗೌಡಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO)ಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಗೌಡಗೆರೆ ಗ್ರಾಮ ಪಂಚಾಯಿತಿ ಪಿಡಿಓ ವೆಂಕಟೇಶ್ ಅಮಾನತುಗೊಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ಗೌಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ನ.12 ರಂದು ಮೌಖಿಕವಾಗಿ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ನ.14 ರಂದು ಚಳ್ಳಕೆರೆ ತಾಲೂಕು ಪಂಚಾಯಿತಿ ಇಓ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಅಕ್ಟೋಬರ್ 10 ರಿಂದ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗದಿರುವುದು ಹಾಜರಾತಿ ಪುಸ್ತಕ ಪರಿಶೀಲಿಸಿದ ವೇಳೆ ಕಂಡು ಬಂದಿದೆ. ಇದರಿಂದ ಸರ್ಕಾರಿ ಕೆಲಸಗಳು ಕುಂಠಿತವಾಗಿವೆ. ಅಭಿವೃದ್ಧಿಗೆ ಹಿನ್ನಡೆಯಾಗಿದೆ.
ಇದನ್ನೂ ಓದಿ: ಇನ್ನು ಮುಂದೆ ಈ ಸ್ಥಳಗಳಲ್ಲಿ ಬೋರ್ ವೆಲ್ ಹಾಕಿಸಲು ಅನುಮತಿ ಕಡ್ಡಾಯ | ಜಿಲ್ಲಾಧಿಕಾರಿ
ಜೊತೆಗೆ ಯಾವುದೇ ಪೂರ್ವಾನುಮತಿ ಪಡೆಯದೇ ಅನಧಿಕೃತವಾಘಿ ಗೈರು ಹಾಜರಾಗಿದ್ದು, ಕರ್ತವ್ಯದ ಅವಧಿಯಲ್ಲಿ ಮದ್ಯ ಸೇವನೆ ಮಾಡುತ್ತಿರುವುದು ಕಂಡು ಬಂದಿದೆ ಎಂಧು ವರದಿ ಸಲ್ಲಿಸಿದ್ದಾರೆ.
ಇದೇ ಪಿಡಿಓ ವೆಂಕಟೇಶ್ ಅವರಿಗೆ ಹೆಚ್ಚುವರಿಯಾಗಿ ಗೋಪನಹಳ್ಳಿ ಗ್ರಾಮ ಪಂಚಾಯಿತಿ ಜವಾಬ್ದಾರಿ ವಹಿಸಲಾಗಿದ್ದು, ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ಅಕ್ಟೋಬರ್ 16 ರಿಂದ ಕರ್ತವ್ಯಕ್ಕೆ ಗೈರಾಗಿರುವುದು ತಿಳಿದು ಬಂದಿದೆ.
ಇದನ್ನೂ ಓದಿ: ಸಂವಿಧಾನ ಸನ್ಮಾನ | ಕಾನೂನು ಸಚಿವ ಸ್ಥಾನಕ್ಕೆ ಅಂಬೇಡ್ಕರ್ ರಾಜಿನಾಮೆ ಕೊಟ್ಟಿದ್ದೇಕೆ ?
ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು, ಕೆಸಿಎಸ್ ನಿಯಮಾವಳಿ ಅನ್ವಯ ಪಿಡಿಓ ವೆಂಕಟೇಶ್ ಅವರನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಿದ್ದಾರೆ.
ಸದರಿ ಗೌಡಗೆರೆ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಓ ಆಗಿ ನನ್ನಿವಾಳ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆರ್.ಪಿ.ವೇದಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.