CHITRADURGA NEWS | 23 JANUARY 2024
ಚಿತ್ರದುರ್ಗ (CHITRADURGA): ಜನರು ಮತ ಹಾಕಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದಿದ್ದು ದೇವರ ಎದುರು ಕುಳಿತು ಭಜನೆ ಮಾಡಲು ಅಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ದೇವರ ಮುಂದೆ ಕುಳಿತು ಭಜನೆ ಮಾಡುವುದರಿಂದ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ದೇಶದಲ್ಲಿ ಹಲವು ಸಮಸ್ಯೆಗಳಿವೆ. ಯುವ ಸಮೂಹ ಬೀದಿಗೆ ಬಿದ್ದಿದೆ. ಉದ್ಯೋಗ ಸಿಗದೇ ಪರದಾಡುತ್ತಿದೆ. ಶ್ರೀರಾಮನ ಹೆಸರಿನಲ್ಲಿ ಅಧಿಕಾರ ಪಡೆದವರು ಇದಕ್ಕೆ ಪರಿಹಾರ ಸೂಚಿಸಿ’ ಎಂದು ಆಗ್ರಹಿಸಿದರು.
‘ಚುನಾವಣೆ ಸಮೀಪಿಸಿದ್ದರಿಂದ ಬಿಜೆಪಿಗೆ ಶ್ರೀರಾಮನ ನೆನಪಾಗಿದೆ. ಅಯೋಧ್ಯೆಯ ರಾಮಮಂದಿರ ರಾಜಕೀಯಕ್ಕೆ ಬಳಕೆಯಾಗುತ್ತಿರುವುದು ದುರದೃಷ್ಟಕರ ಎಂದು’ ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ: ಇಂದು ವಿದ್ಯುತ್ ವ್ಯತ್ಯಯ
‘ನಾನು ಕೂಡ ಹಿಂದೂ. ಧರ್ಮ, ಭಕ್ತಿಯ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನನಗೆ ಇಲ್ಲ. ಸರ್ವಧರ್ಮಗಳನ್ನು ಸಮಾನವಾಗಿ ಪ್ರೀತಿಸುತ್ತೇನೆ. ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತೇವೆ. ಮತ್ತೊಂದು ಧರ್ಮವನ್ನು ಅವಹೇಳನ ಮಾಡುವ ಪ್ರವೃತ್ತಿ ಬಿಜೆಪಿಯಲ್ಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಶ್ರೀರಾಮ ಪ್ರತಿಯೊಬ್ಬರಿಗೂ ಬೇಕಾದ ದೇವರು. ಅಯೋಧ್ಯೆಯ ರಾಮ ದೇಶದ ಸರ್ವರ ದೇವರಾಗಬೇಕಿತ್ತು. ಆದರೆ, ಬಿಜೆಪಿ ಇದನ್ನು ತನ್ನ ರಾಜಕೀಯಕ್ಕೆ ಉಪಯೋಗಿಸಿ ಕೊಳ್ಳಲು ಮುಂದಾಗಿದೆ. ದೇವರು ಮತ್ತು ಧರ್ಮವನ್ನು ರಾಜಕೀಯಕ್ಕೆ ಬಳಸುವುದು ಅಪಾಯಕಾರಿ’ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
