CHITRADURGA NEWS | 30 SEPTEMBER 2026
ಚಿತ್ರದುರ್ಗ: ತಾವು ಮೊದಲ ಬಾರಿಗೆ ಶಾಸಕರಾಗಿರಬಹುದು. ಆದರೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಡಾಕ್ಟರೇಟ್ ಪಡೆದಿದ್ದರೂ ಇದುವರೆಗೆ ಯಾವುದೇ ಚುನಾವಣೆಯಲ್ಲಿ ಗೆದ್ದಿಲ್ಲ. ಕಾರ್ಯಕರ್ತರ ಮೂಲಕ ತಾವೇ ಬ್ಯಾನರ್ ಹರಿದುಕೊಳ್ಳುವಂತೆ ಮಾಡಿ, ಮಾಧ್ಯಮಗಳಲ್ಲಿ ಪ್ರಚಾರ ಪಡೆಯುವ ಕೀಳುಮಟ್ಟದ ರಾಜಕೀಯ ತಮಗೆ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಇದನ್ನೂ ಓದಿ: ಸಿಸಿಟಿವಿ ಕಣ್ಗಾವಲಿನಲ್ಲಿ ಭೂಮಾಪಕ, ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ | ಡಿಸಿ ರಮ್ಯಾ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಪಾದಯಾತ್ರೆ, ಬ್ಯಾನರ್ ವಿವಾದ ಹಾಗೂ ಪ್ರಮುಖ ನಾಯಕರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದರು.
ಬಳ್ಳಾರಿಯಲ್ಲಿ ಬಿಜೆಪಿ ವತಿಯಿಂದ 10 ದಿನಗಳ ಕಾಲ ನಡೆದ ಬೃಹತ್ ಪಾದಯಾತ್ರೆಯ ಯಶಸ್ಸಿನಿಂದ ಪ್ರೇರಣೆ ಪಡೆದು ಕಾಂಗ್ರೆಸ್ ನಾಯಕರು ಶಿಕಾರಿಪುರದಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು. ಶಿಕಾರಿಪುರ ತಾಲೂಕು ಹೋರಾಟದ ಹಾದಿಗೆ ಹೆಸರುವಾಸಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜಕೀಯ ಜನ್ಮ ನೀಡಿದ ಕ್ಷೇತ್ರವಾಗಿದೆ. ಇಲ್ಲಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದು, ಅವರಿಗೆ ಒಳ್ಳೆಯದಾಗಲಿ ಎಂದರು.
ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧದ ಲಂಚದ ಆರೋಪಗಳ ಕುರಿತು ಮಾತನಾಡಿದ ಅವರು, ಈ ಪ್ರಕರಣಗಳು ಈಗಾಗಲೇ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದು, ನಿರಪರಾಧಿತ್ವ ಸಾಬೀತಾಗಿದೆ ಎಂದು ಹೇಳಿದರು. ಯುಪಿಎ ಸರ್ಕಾರದ ಅವಧಿಯಲ್ಲೇ ಈ ಕುರಿತು ತನಿಖೆ ನಡೆದಿತ್ತು. ಇದೀಗ ಹತಾಶೆಯಿಂದ ಕಾಂಗ್ರೆಸ್ ನಾಯಕರು ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಇದನ್ನೂ ಓದಿ: ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವೂ ಅಗತ್ಯ | ಮಾಲತೇಶ್
ರಾಜ್ಯದಲ್ಲಿ ಕಾಂಗ್ರೆಸ್ನೊಳಗಿನ ಆಂತರಿಕ ಭಿನ್ನಮತ ಹಾಗೂ ಶಕ್ತಿ ಪ್ರದರ್ಶನ ಬಹಿರಂಗವಾಗುತ್ತಿದೆ. ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಜನರು ಹಾಗೂ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸೂಕ್ತ ಸಮಯದಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಹಿರಿಯೂರು ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ಆಯ್ಕೆ ಕುರಿತು ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

