ಮುಖ್ಯ ಸುದ್ದಿ
Prime minister; ನರೇಂದ್ರ ಮೋದಿ ಜನ್ಮ ದಿನಾಚರಣೆ | ಪೊರಕೆ ಹಿಡಿದು ಸ್ವಚ್ಛತೆ ಮಾಡಿದ ಜನಪ್ರತಿನಿಧಿಗಳು
CHITRADURGA NEWS | 17 SEPTEMBER 2024
ಚಿತ್ರದುರ್ಗ: ಪ್ರಧಾನಿ ಮಂತ್ರಿ(Prime minister) ನರೇಂದ್ರ ಮೋದಿ(Narendra Modi) ಅವರ ಜನ್ಮದಿನದ ಅಂಗವಾಗಿ ನಗರದ ಜೆಸಿಆರ್ ನಲ್ಲಿರುವ ಗಣಪತಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಸೇರಿದಂತೆ ಇತರರು ಪೊರಕೆ ಹಿಡಿದು ಸ್ವಚ್ಛತೆ(clean) ಮಾಡಿದರು.
ಕ್ಲಿಕ್ ಮಾಡಿ ಓದಿ: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಅಪಘಾತ
ನಂತರ ಮಾತನಾಡಿ ಸಂಸದರು, ದೇಶದಲ್ಲಿರುವ 140 ಕೋಟಿ ಜನರು ದೇಶಭಕ್ತರಾಗಬೇಕು. ದೇಶದ್ರೋಹಿಗಳಾಗಬಾರದೆಂದು ಎಂದು ಹೇಳಿದರು.
ದೇಶದ ಪ್ರಧಾನಿ ನರೇಂದ್ರಮೋದಿರವರ ಜನ್ಮದಿನದ ಅಂಗವಾಗಿ ಜೆಸಿಆರ್ ನಲ್ಲಿರುವ ಗಣಪತಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸೋಮವಾರದಿಂದ ಅ.2 ರವರೆಗೆ ನಿರಂತರವಾಗಿ ಸೇವಾ ಸಪ್ತಾಹ ಕಾರ್ಯಕ್ರಮಗಳು ನಡೆಯುತ್ತವೆ. ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವವರ ಅಮೂಲ್ಯವಾದ ಜೀವ ಉಳಿಸಬೇಕು. ಸ್ವಚ್ಚ ಭಾರತ್ ಅಡಿ ದೇಶದಲ್ಲಿ ಹತ್ತು ಕೋಟಿಗೂ ಹೆಚ್ಚು ಶೌಚಾಲಯಗಳನ್ನು ಕಟ್ಟಿಸಲಾಗಿದೆ.
ಪ್ರಥಮ ಬಾರಿಗೆ ನರೇಂದ್ರ ಮೋದಿ ದೇಶದ ಪ್ರಧಾನಿಯಾದಾಗ ಕೆಂಪುಕೋಟೆ ಮೇಲೆ ನಿಂತು ಭಾಷಣ ಮಾಡುತ್ತ ದೇವಾಲಯಗಳಿಗಿಂತ ಶೌಚಾಲಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಭಾಷಣ ಮಾಡಿದ್ದರು.
ಕ್ಲಿಕ್ ಮಾಡಿ ಓದಿ: Gaurasandra Maramma; ಹೊಳಲ್ಕೆರೆ ರಸ್ತೆಯ ಗೌರಸಂದ್ರ ಮಾರಮ್ಮ ದೇವಿಯ ಅಲಂಕಾರಕ್ಕೆ ಮನಸೋತ ಭಕ್ತರು
ಯಾವುದೇ ಜಾತಿ ಧರ್ಮದವರಾಗಲಿ ಭಾರತದ ವಿರುದ್ದ ಘೋಷಣೆಗಳನ್ನು ಕೂಗುವುದು, ಧ್ವಜ ಪ್ರದರ್ಶಿಸುವುದಾಗಲಿ ಅಂತಹವರ ವಿರುದ್ದ ಕ್ರಮ ಕೈಗೊಳ್ಳಲು ಕಾನೂನಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬದ ಪ್ರಯುಕ್ತ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೇವಾ ಸಪ್ತಾಹ ನಡೆಯಲಿದೆ. ಬಸವೇಶ್ವರ ಆಸ್ಪತ್ರೆಯಲ್ಲಿ ಶುಕ್ರವಾರ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದಾಗುವಂತೆ ಮನವಿ ಮಾಡಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ವಕ್ತಾರ ನಾಗರಾಜ್‍ಬೇದ್ರೆ ಸೇರಿದಂತೆ ಇತರರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.