CHITRADURGA NEWS | 23 JANUARY 2024
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕರೆ ನೀಡಿದ್ದ ಚಿತ್ರದುರ್ಗ ನಗರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನರು ಸ್ವಯಂ ಪ್ರೇರಿತವಾಗಿ ಬಂದ್‌ಗೆ ಕೈ ಜೋಡಿಸಿದ್ದು, ನಗರ ನಿಧಾನವಾಗಿ ಸ್ತಬ್ಧವಾಗುತ್ತಿದೆ.
ಬೆಳಿಗ್ಗೆ 7 ಗಂಟೆಯಿಂದಲೇ ನಗರ ವ್ಯಾಪ್ತಿಯಲ್ಲಿ ಬಸ್, ಆಟೊ ಸೇರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ವಿವಿಧ ಸಂಘ ಸಂಸ್ಥೆಗಳ ಮುಖಂಡರು ಬಂದ್‌ಗೆ ಬೆಂಬಲ ಘೋಷಿಸಿರುವುದರಿಂದ ಅಂಗಡಿ, ವ್ಯಾಪಾರ ವಹಿವಾಟು ಬಂದ್ ಆಗಿದೆ. ನಗರದ ಖಾಸಗಿ ಶಾಲಾ ಕಾಲೇಜ್‌ಗಳು ಬಂದ್‌ಗೆ ನೈತಿಕ ಬೆಂಬಲ ಸೂಚಿಸಿದ್ದು, ಶಾಲೆಗಳಿಗೆ ಆಡಳಿತ ಮಂಡಳಿ ರಜೆ ಘೋಷಿಸಿದೆ.
ಇದನ್ನೂ ಓದಿ: ಇಂದು ವಿದ್ಯುತ್ ವ್ಯತ್ಯಯ
ಜಿಲ್ಲೆಯ ರೈತಪರ, ಕನ್ನಡ ಪರ, ಕಾರ್ಮಿಕ ಸೇರಿ 20 ಹೆಚ್ಚು ಸಂಘಟನೆಗಳು ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿವೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮವಹಿಸಿದ್ದಾರೆ. ಕೆಲ ಖಾಸಗಿ ಬಸ್‌ಗಳು ರಾತ್ರಿಯೇ ನಗರದ ಹೊರ ವಲಯದಲ್ಲಿ ನಿಲ್ಲಿಸಿ ಅಲ್ಲಿಂದ ಚಳ್ಳಕೆರೆ, ನಾಯಕನಹಟ್ಟಿ, ಜಗಳೂರು, ದಾವಣಗೆರೆಗೆ ಸಂಚರಿಸುತ್ತಿವೆ.
ಕಳೆದ 25 ವರ್ಷಗಳಿಂದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ರಾಜ್ಯದ ಯಾವುದೇ ನೀರಾವರಿ ಯೋಜನೆ ಇಷ್ಟು ಸುಧೀರ್ಘ ಸಮಯ ತೆಗೆದುಕೊಂಡಿಲ್ಲ. ಸುಳ್ಳಿನ ರಾಜಕಾರಣ, ರಾಜಕೀಯ ಇಚ್ಚಾಶಕ್ತಿ ಕೊರತೆಯಿಂದ ಯೋಜನೆ ಸಾಕಾರವಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ ಬಜೆಟ್ ನಲ್ಲಿ ನೀರಾವರಿ ಯೋಜನೆ ಪೂರ್ಣಗೊಳಿಸಲು ಸರ್ಕಾರ ಅನುದಾನ ಮೀಸಲಿಡಬೇಕು ಎಂದು ರೈತರಿಂದ ಒತ್ತಾಯಿಸಿದ್ದಾರೆ.
ಸಮಿತಿಯ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಬಂದ್ ನಡೆಯಿತ್ತಿದೆ. ಬಿ.ಡಿ.ರಸ್ತೆ, ಗಾಂಧಿ ವೃತ್ತ, ಹೊಳಲ್ಕೆರೆ ಮಾರ್ಗ, ಮೆದೇಹಳ್ಳಿ ರಸ್ತೆಗಳು ಬಿಕೋ ಎನ್ನುತ್ತಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
