
CHITRAUDRGA NEWS | 17 APRIL 2026
ಚಿತ್ರದುರ್ಗ: 2025-26ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಎಸ್.ಆರ್.ಎಸ್. ಹೆರಿಟೇಜ್ ಶಾಲೆ ಶೇ.100 ಫಲಿತಾಂಶ ಗಳಿಸಿ ಸತತ 9ನೇ ವರ್ಷ ಶೇ.100ರ ಫಲಿತಾಂಶ ದಾಖಲಿಸಿದೆ.
ಇದನ್ನೂ ಓದಿ: ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ

ಶಾಲೆಯ ವಿದ್ಯಾರ್ಥಿಗಳಾದ ರುಮಂಡ್ಲ ಅದಿತ್ರಿ. (98.2%), ಲಲಿತ್ ಕಿಶೋರ್ ಜಿ. ಆರ್. (98%) ಮತ್ತು ಪ್ರತೀಕ್ಷ ವಿ.ಎನ್. (96.4%) ಅಗ್ರಸ್ಥಾನ ಪಡೆದುಕೊಂಡಿದ್ದಾರೆ.
ಇದರೊಟ್ಟಿಗೆ 9 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 100ಕ್ಕೆ 100ರಷ್ಟು ಅಂಕ ಪಡೆದುಕೊಂಡಿದ್ದಾರೆ.
ಒಟ್ಟು 187 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಹಾಗೂ 116 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
ಸಂಸ್ಥೆಯ ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ, ಕಾರ್ಯದರ್ಶಿ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷ ಅಮೋಘ್ ಬಿ.ಎಲ್. ಡಾ|ರವಿ, ಉಪಪ್ರಾಚಾರ್ಯ ಪ್ರಭಾಕರ್. ಎಂ.ಎಸ್ ಮಕ್ಕಳಿಗೆ ಶುಭ ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
