Connect with us

    ಡಿಸಿ ಕಚೇರಿಯಲ್ಲಿ ಅಹವಾಲು ಸ್ವೀಕಾರಕ್ಕೆ ಶಾಶ್ವತ ಕೌಂಟರ್ | ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್

    ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪತ್ರಕರ್ತರೊಂದಿಗೆ ಪರಿಚಯಾತ್ಮ ಭೇಟಿ.

    ಮುಖ್ಯ ಸುದ್ದಿ

    ಡಿಸಿ ಕಚೇರಿಯಲ್ಲಿ ಅಹವಾಲು ಸ್ವೀಕಾರಕ್ಕೆ ಶಾಶ್ವತ ಕೌಂಟರ್ | ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 31 JANUARY 2024

    ಚಿತ್ರದುರ್ಗ: ಸಾರ್ವಜನಿಕರ ಮನವಿ ಸ್ವೀಕರಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಶ್ವತ ಕೌಂಟರ್ ಸ್ಥಾಪಿಸಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಪತ್ರಕರ್ತರೊಂದಿಗೆ ಪರಿಚಯಾತ್ಮ ಭೇಟಿ ವೇಳೆ ತಮ್ಮ ಅಭಿಪ್ರಾಯ ಹಂಚಿಕೊಂಡರು.

    ಇದನ್ನೂ ಓದಿ: ಹಿರಿಯೂರಿನಲ್ಲಿ ಆಸಿಡ್ ದಾಳಿ ನಡೆಸಿದ್ದ ಮೂರು ಜನರ ಬಂಧನ

    ಸಾರ್ವಜನಿಕರು ಜಿಲ್ಲೆಯ ವಿವಿಧ ತಾಲ್ಲೂಕುಗಳು, ದೂರ ದೂರದ ಊರುಗಳಿಂದ ತಮ್ಮ ಕೆಲಸ ಕಾರ್ಯಗಳಿಗೆ, ಅರ್ಜಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುತ್ತಾರೆ.

    ಅಂಥವರು ಇಡೀ ದಿನ ಅಧಿಕಾರಿಗಳ ಭೇಟಿಗಾಗಿ ಕಾಯುವಂತೆ ಆಗಬಾರದು. ಅವರ ಸಮಯ ವ್ಯರ್ಥವಾಗಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು, ಅರ್ಜಿಗಳನ್ನು ಸ್ವೀಕರಿಸಲು ಶಾಶ್ವತ ಕೌಂಟರ್ ಒಂದನ್ನು ಸ್ಥಾಪಿಸಲಾಗುವುದು ಎಂದು ವಿವರಿಸಿದರು.

    ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಪಡೆದು, ಅವರಿಗೆ ಸ್ವೀಕೃತಿ ನೀಡಲಾಗುವುದು. ಅಲ್ಲದೆ ಅಂತಹ ಅರ್ಜಿಗಳನ್ನು ಗಣಕೀಕರಣಗೊಳಿಸಿ, ಕಾಲಮಿತಿಯಲ್ಲಿ ವಿಲೇವಾರಿ ಮಾಡಲು, ಅರ್ಜಿಗಳಿಗೆ ಸ್ಪಂದಿಸಲು ವಿಶೇಷ ಆದ್ಯತೆ ನೀಡಲಾಗುವುದು.

    ಇದನ್ನೂ ಓದಿ: ಮುರುಘಾ ಶರಣರಿಗೆ ಜಾಮೀನು | ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಒಡನಾಡಿ

    ಅರ್ಜಿಗಳ ವಿಲೇವಾರಿ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ, ಪರಿಶೀಲನೆ ಮಾಡಲಾಗುವುದು. ಜಿಲ್ಲಾಧಿಕಾರಿಯಾಗಿ ಕಚೇರಿಗೆ ಮಾತ್ರ ಸೀಮಿತವಾಗದೇ, ಗ್ರಾಮಗಳಿಗೆ ತೆರಳಿ, ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಂದಲೇ ಮಾಹಿತಿ ಪಡೆಯಲು ಬಯಸುತ್ತೇನೆ. ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಸ್ಥಳದಲ್ಲಿಯೇ ಸಾರ್ವಜನಿಕರ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಮಟ್ಟಿಗೆ ಪರಿಹಾರ ಒದಗಿಸಲು ಶ್ರಮಿಸುವ ಮೂಲಕ ಜನಸ್ನೇಹಿ ಆಡಳಿತ ನೀಡುವುದಾಗಿ ನೂತನ ಜಿಲ್ಲಾಧಿಕಾರಿ ವೆಂಕಟೇಶ್ ಹೇಳಿದರು.

    ಜಿಲ್ಲಾಧಿಕಾರಿ ಟಿ.ವೆಂಕಟೇಶ್

    ಜಿಲ್ಲಾಧಿಕಾರಿ ಟಿ.ವೆಂಕಟೇಶ್

    ಬರ ನಿರ್ವಹಣೆ ಮೊದಲ ಆಧ್ಯತೆ:

    ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಪ್ರಸ್ತುತ ಬರ ಪರಿಸ್ಥಿತಿ ಇದ್ದು, ಬರ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲು ಶ್ರಮಿಸುತ್ತೇನೆ.

    ನಾನು ಈ ಹಿಂದೆ ಚಿತ್ರದುರ್ಗ, ಹರಪನಹಳ್ಳಿ ಉಪವಿಭಾಗಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ ಅಪರ ಜಿಲ್ಲಾಧಿಕಾರಿ, ಮೈಸೂರು ಜಿಲ್ಲೆ ಅಪರ ಜಿಲ್ಲಾಧಿಕಾರಿ, ರಾಜ್ಯ ಪುರಾತತ್ವ ಇಲಾಖೆ ಆಯುಕ್ತರು, ಕೆಎಸ್‍ಆರ್‍ಟಿಸಿ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಹೀಗೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಇದೀಗ ಚಿತ್ರದುರ್ಗ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದೇನೆ.

    ಇದನ್ನೂ ಓದಿ: ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದ 18 ಜೋಡಿಗಳನ್ನು ಒಂದಾಗಿಸಿದ ಲೋಕ ಅದಾಲತ್

    ಈ ಹಿಂದೆ ಜಿಲ್ಲೆಯಲ್ಲಿ ಕೆಲಸ ಮಾಡಿದ ಅನುಭವವಿದೆ, ಹೀಗಾಗಿ ಇಲ್ಲಿನ ಸಮಸ್ಯೆಗಳ ಬಗ್ಗೆಯೂ ಮಾಹಿತಿ ಇದೆ. ಪ್ರಸ್ತುತ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದು, ಬರ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

    ಈ ವೇಳೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕಾರಾಂರಾವ್ ಸೇರಿದಂತೆ ಜಿಲ್ಲಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ವಿವಿಧ ಮಾಧ್ಯಮಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top