
CHITRADURGA NEWS | 27 February 2026
ಚಿತ್ರದುರ್ಗ: ನಗರದ ತೋಟಗಾರಿಕೆ ಇಲಾಖೆಯ 6.30 ಎಕರೆ ಜಾಗದಲ್ಲಿ ನೂತನ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆ ಸಚಿವರ ಅನುಮತಿ ದೊರೆತಿದೆ.
ಇದನ್ನೂ ಓದಿ: ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿ | SJM ಫಾರ್ಮಸಿ ಕಾಲೇಜು ಪ್ರಥಮ

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಡಿ.ಸುಧಾಕರ್ ಸಮ್ಮುಖದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕುಂಚಿಗನಾಳು ಹತ್ತಿರ ನಿರ್ಮಾಣ ಮಾಡಲಾಗಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿಯು ಚಿತ್ರದುರ್ಗ ನಗರದಿಂದ ದೂರವಿದ್ದು, ಕಚೇರಿ ಕಾರ್ಯಗಳಿಗೆ ಬರುವ ಜಿಲ್ಲೆಯ ಸಾರ್ವಜನಿಕರಿಗೆ ಓಡಾಡಲು ತುಂಬಾ ತೊಂದರೆಯಾಗುವ ಕಾರಣದಿಂದ ಈ ನೂತನ ಜಿಲ್ಲಾಧಿಕಾರಿಗಳ ಕಚೇರಿಯನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಚಿತ್ರದುರ್ಗ ನಗರದಲ್ಲಿಯೇ ನೂತನವಾಗಿ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣ ಮಾಡುವ ಸಂಬಂಧ ಕಳೆದ ಒಂದು ವರ್ಷದಿಂದ ಕಂದಾಯ ಇಲಾಖೆ ಸಚಿವರು, ವೈದ್ಯಕೀಯ ಇಲಾಖೆ ಸಚಿವರು ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜೊತೆ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಶಾಸಕರು ಬೆಂಗಳೂರಿನ ವಿಧಾನಸೌಧ ಹಾಗೂ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿಯೂ ಸಹ ನಿರಂತರವಾಗಿ ಸಭೆ ನಡೆಸಲಾಗಿತ್ತು.
ಫೆ.ರಂದು ವಿಕಾಸಸೌಧದ ಕೊಠಡಿ ಸಂಖ್ಯೆ 342 ರಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ.ಡಿ.ಸುಧಾಕರ್ ಹಾಗೂ ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಹಾಲಿ ಇರುವ ತೋಟಗಾರಿಕೆ ಇಲಾಖೆಯ 6.10 ಎಕರೆ ಮತ್ತು ಹಾಪ್ ಕಾಮ್ಸ್ ವ್ಯಾಪ್ತಿಯ 20 ಗುಂಟೆ ಸೇರಿ ಒಟ್ಟು 6.30 ಎಕರೆ ಜಮೀನನ್ನು ನೂತನ ಜಿಲ್ಲಾಧಿಕಾರಿಗಳ ನಿರ್ಮಾಣಕ್ಕೆ ನೀಡಲು ತೀರ್ಮಾನಿಸಲಾಗಿರುತ್ತದೆ. ತೋಟಗಾರಿಕೆ ಇಲಾಖೆಗೆ ಸದರಿ ಜಮೀನಿನ ಬದಲಾಗಿ ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ಚಿಕ್ಕಪುರ ಗ್ರಾಮದ ರಿ.ಸ.ನಂ.96 ಮತ್ತು ರಿ.ಸ.ನಂ.101 ರಲ್ಲಿ 20 ಎಕರೆ ಜಮೀನನ್ನು ಸರ್ಕಾರದಿಂದ ನೀಡಲು ತೀರ್ಮಾನ ಕೈಗೊಳ್ಳಲಾಗಿರುತ್ತದೆ.
ಇದನ್ನೂ ಓದಿ: ಫೆ.28 ರಂದು ಅಪರೂಪದ ಗ್ರಹಗಳ ಪರೇಡ್
ಹಾಲಿ ಇರುವ ತೋಟಗಾರಿಕೆ ಇಲಾಖೆ ಕಚೇರಿಗೆ ನೂತನವಾಗಿ ನಿರ್ಮಾಣ ಮಾಡಲಾಗುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಳಾವಕಾಶ ಕಲ್ಪಿಸಿಕೊಡಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಶಾಸಕರಾದ ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಕೆ.ಸಿ.ವೀರೇಂದ್ರ ಪಪ್ಪಿ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿಗಳು, ತೋಟಗಾರಿಕೆ ಇಲಾಖೆ ನಿರ್ದೇಶಕರು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಚಿತ್ರದುರ್ಗ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಮತ್ತಿತರ ಅಧಿಕಾರಿಗಳು ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
