CHITRADURGA NEWS | 16 JULY 2025
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಕಡೂರು ಕೆರೆ ತುಂಬಿಸುವ ಯೋಜನೆಗಳಿಗೆ ಮುಂಗಾರು ಹಂಗಾಮಿನ ನೀರು ಹರಿಸಲು ಸರ್ಕಾರ ಅನುಮತಿ ನೀಡಿದೆ.

ಇದನ್ನೂ ಓದಿ: ವಾಕ್ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿ
ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರಕ್ಕೆ ಬರೆದಿದ್ದ ಪತ್ರಕ್ಕೆ ಅಪರ ಮುಖ್ಯ ಕಾರ್ಯದರ್ಶಿಗಳು ಪ್ರತಿಕ್ರಿಯಿಸಿದ್ದು, ನೀರು ಹರಿಸಲು ಅನುಮತಿ ನೀಡಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ಹಾಗೂ ಕಡೂರು ಕೆರೆ ತುಂಬಿಸುವ ಯೋಜನೆಗಳಿಗೆ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭದ್ರಾ ಜಲಾಶಯದಿಂದ ತರೀಕರ ಏತ ನೀರಾವರಿ ಯೋಜನೆಯ ಅಡಿ ಬರುವ ಅಚ್ಚುಕಟ್ಟು ಪ್ರದೇಶಕ್ಕೆ ನೀರೊದಗಿಸಲು ಹಾಗೂ ಇದರಡಿ ಬರುವ ನಿಗದಿತ 79 ಕೆರೆಗಳನ್ನು ಅವುಗಳ ಸಾಮರ್ಥ್ಯದ ಶೇ.50 ರಷ್ಟನ್ನು ತುಂಬಿಸಲು ಪ್ರಸ್ತಾಪಿಸಲಾಗಿದೆ.
ಈ ಕೆರೆಗಳನ್ನು ತುಂಬಿಸಲು 1.47 ಟಿಎಂಸಿ ನೀರು, ವಾಣಿವಿಲಾಸ ಸಾಗರ ಜಲಾಶಯಕ್ಕೆ 2 ಟಿಎಂಸಿ ನೀರನ್ನು ಹರಿಸುವುದು ಹಾಗೂ ಚಿತ್ರದುರ್ಗ ಶಾಖಾ ಕಾಲುವೆಯಡಿ ಬರುವ ಕಡೂರು ಹಾಗೂ ಹೊಸದುರ್ಗ ತಾಲ್ಲೂಕಿನ ಅಚ್ಚುಕಟ್ಟು ಪ್ರುದೇಶದಲ್ಲಿ ಬರುವ ಭಾಗಶಃ ಸಂಖ್ಯೆ ಕೆರೆಗಳಿಗೆ ನೀರನ್ನು ಹರಿಸಲು 0.50 ಟಿ.ಎಂ.ಸಿ ಹಾಗೂ ಕಡೂರು ಕೆರೆ ತುಂಬುವ ಯೋಜನೆಯ ಹಂತ-1ರಡಿ ಬರುವ ಕೆರೆಗಳಿಗೆ ಪ್ರಾಯೋಗಿಕವಾಗಿ ನೀರನ್ನು ಹರಿಸಲು 0.24 ಟಿಎಂಸಿ ಮೀಸಲಿಟ್ಟು ಅವಕಾಶ ನೀಡಲಾಗಿದೆ.
ಇದನ್ನೂ ಓದಿ: BNS ಕಾಯ್ದೆಯಡಿ ಜಿಲ್ಲೆಯಲ್ಲಿ ಮೊದಲ ಶಿಕ್ಷೆ | ಕಳ್ಳತನ ಮಾಡಿದ ಆರೋಪಿಗೆ ಜೈಲುವಾಸ | ಹೊಳಲ್ಕೆರೆ ನ್ಯಾಯಾಲಯ
ಒಟ್ಟಾರೆ ಭದ್ರಾ ಜಲಾಶಯದಿಂದ ಸುಮಾರು 4.21 ಟಿಎಂಸಿ ನೀರನ್ನೆತ್ತಲು ಅನುಮತಿ ನೀಡಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
