
ಚಿತ್ರದುರ್ಗ ನ್ಯೂಸ್.ಕಾಂ: ಬೆನ್ನು ನೋವು ತಾಳಲಾರದೆ ವೃದ್ಧ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲ್ಲೂಕು ಧರ್ಮಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದಾಸಪ್ಪ(84) ಮೃತ ವ್ಯಕ್ತಿ. ಸುಮಾರು ವರ್ಷಗಳಿಂದ ದಾಸಪ್ಪ ಬೆನ್ನು ನೋವಿನಿಂದ ಬಳಲುತ್ತಿದ್ದ. ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರು ಸಹ ಗುಣಮುಖವಾಗಿರಲಿಲ್ಲ.
ಇದರಿಂದ ಮನನೊಂದು ಗುರುವಾರ ಮುಂಜಾನೆ 3 ಗಂಟೆಯಲ್ಲಿ ವಿಷ ಕುಡಿದಿದ್ದಾರೆ. ಅಸ್ವಸ್ಥರಾಗಿದ್ದ ದಾಸಪ್ಪನನ್ನು ಕುಟುಂಬಸ್ಥರು ಕೂಡಲೇ ಚಿಕಿತ್ಸೆಗೆ ಧರ್ಮಪುರ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 6.45 ಕ್ಕೆ ಮೃತಪಟ್ಟಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಣ್ಣಿಗೆ ಖಾರದಪುಡಿ ಹಾಕಿ ಕಳ್ಳತನ ಮಾಡಿದ್ದ ಪ್ರಕರಣ | ನಾಲ್ಕೇ ದಿನಗಳಲ್ಲಿ ಆರೋಪಿಗಳ ಬಂಧನ
ಥೈರಾಯಿಡ್ ಸಮಸ್ಯೆ; ವಿಷ ಸೇವಿಸಿ ವ್ಯಕ್ತಿ ಸಾವು
ಥೈರಾಯಿಡ್ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ವಿಷ ಸೇವಿಸಿ ಮೃತಪಟ್ಟ ಘಟನೆ ಹೊಳಲ್ಕೆರೆ ತಾಲ್ಲೂಕು ಸಿಂಗೇನಹಳ್ಳಿಯಲ್ಲಿ ನಡೆದಿದೆ.
ಸುಮಾರು 12 ವರ್ಷಗಳಿಂದ ಥೈರಾಯಿಡ್ ಕಾಯಿಲೆಯಿಂದ ಬಳಲುತ್ತಿದ್ದ ಶಿವಕುಮಾರಸ್ವಾಮಿ(55) ಮಣಿಪಾಲ್ ಕಸ್ತೂರಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು ಗುಣಮುಖವಾಗಿರಲಿಲ್ಲ. ಇದರಿಂದ ಜಿಗುಪ್ಸೆಗೊಂಡು ಬುಧವಾರ ರಾತ್ರಿ ತೋಟಕ್ಕೆ ಸಿಂಪಡಿಸಲು ತಂದಿದ್ದ ಕಳೆನಾಶಕವನ್ನು ಸೇವನೆ ಮಾಡಿದ್ದಾರೆ.
ಅಸ್ವಸ್ಥರಾಗಿದ್ದ ಶಿವ ಕುಮಾರಸ್ವಾಮಿಯನ್ನು ಕೂಡಲೇ ಹೊಳಲ್ಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ನಸುಕಿನ 4.5 ಕ್ಕೆ ಮೃತಪಟ್ಟಿದ್ದಾನೆ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

