CHITRADURGA NEWS | 28 JULY 2026
ಚಿತ್ರದುರ್ಗ: ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಭೆಯಲ್ಲಿ, ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವಂತೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಕೃತಕ ಬುದ್ಧಿಮತ್ತೆ (AI) ವಿಷಯಕ್ಕೆ ಅತಿಥಿ ಶಿಕ್ಷಕರ ನೇಮಕಾತಿ | ಅರ್ಜಿ ಆಹ್ವಾನ
ಸಭೆಯಲ್ಲಿ ಪ್ರಮುಖವಾಗಿ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿರುವ ಪ್ರಕರಣದ ಪ್ರಸ್ತುತ ಸ್ಥಿತಿಗತಿ, ನೌಕರರ ಮೇಲಾಗುತ್ತಿರುವ ದೌರ್ಜನ್ಯಗಳು ಮತ್ತು ಸಮಸ್ಯೆಗಳು ಹಾಗೂ ನಾಯಕ ನೌಕರರ ಸಂಘಟನೆ ಬಲಪಡಿಸುವ ಕುರಿತು ವಿಸ್ತøತ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಜಗದೀಶ್ ಮೂರ್ತಿ, ಚಿತ್ರದುರ್ಗ ಜಿಲ್ಲಾಧ್ಯಕ್ಷ ರಾಜಪ್ಪ, ದಾವಣಗೆರೆ ಜಿಲ್ಲಾಧ್ಯಕ್ಷ ಕೆ.ಸಿ. ಶ್ರೀನಿವಾಸಮೂರ್ತಿ, ಮೈಸೂರು ಜಿಲ್ಲಾಧ್ಯಕ್ಷ ಮಂಜುನಾಥ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ. ಮಹಾಂತೇಶ್ ಹಾಗೂ ತಾಲೂಕು ಅಧ್ಯಕ್ಷರಾದ ಸುವರ್ಣಮ್ಮ ಮತ್ತು ಕರಿಬಸಣ್ಣ, ವಾಲ್ಮೀಕಿ ಶಿಕ್ಷಕರ ವೇದಿಕೆಯ ಸುದರ್ಶನ್, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಪ್ರಶಾಂತ್ ಕುಮಾರ್, ಸರ್ಕಾರಿ ಅಭಿಯೋಜಕಿ ರೂಪಾ, ವಕೀಲರಾದ ಅಶೋಕ್, ಜಯಣ್ಣ, ಶರಣಪ್ಪ, ಡಾ. ಹನುಮಂತಪ್ಪ, ಡಾ. ಗಿರೀಶನಾಯಕ್, ಡಾ. ವಿಜಯಕುಮಾರ್, ಡಾ. ಮದಕರಿ, ಶ್ರೀನಿವಾಸ ನಾಯಕ, ಚನ್ನಕೇಶವ, ವಸಂತಕುಮಾರ್, ಎಸ್‍ಬಿಐ ಪ್ರಬಂಧಕ ರಮೇಶ್ ಸೇರಿದಂತೆ ರಾಜಣ್ಣ, ಗೌರಮ್ಮ, ಬೊಮ್ಮಲಿಂಗಣ್ಣ, ಕರಿಯಣ್ಣ, ವೆಂಕಟೇಶ್, ಬಸವರಾಜ್, ಪ್ರಕಾಶ್, ಕರಿಸಿದ್ದಪ್ಪ, ಪರಮೇಶ್ವರಪ್ಪ, ಪುಷ್ಪಲತಾ ಹಾಗೂ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

