CHITRADURGA NEWS | 20 JUNE 2024
ಚಿತ್ರದುರ್ಗ: ರಾಜ್ಯ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಗುರುವಾರ ಮಾನವ ಸರಪಳಿ ನಿರ್ಮಿಸಿ ಹಾಗೂ ಕಾರಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಸಾಹಿತಿಗಳು ರಾಜಕಾರಣಿಗಳೇ ಎಂದಿದ್ದು ತಪ್ಪು | ಸಾಣೇಹಳ್ಳಿ ಶ್ರೀ

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದು ವರ್ಷದಲ್ಲೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿರುವುದರಿಂದ ಬಸ್, ಟ್ಯಾಕ್ಸಿ, ಹಾಗೂ ತರಕಾರಿ ದರ ಜಾಸ್ತಿಯಾಗಿದೆ. ಕೂಡಲೆ ಬೆಲೆ ಇಳಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲು ಅವಕಾಶ ನೀಡಿರುವುದನ್ನು ನಾವು ಸ್ವಾಗತಿಸುತ್ತೇವೆ. ಇದರ ಬೆನ್ನ ಹಿಂದೆಯೇ ಬಸ್ ಟಿಕೆಟ್ ದರ ಏರಿಸಿ ಬಡವರಿಗೆ ಹೊರೆ ಹೇರಿರುವ ಕಾಂಗ್ರೆಸ್ ಸರ್ಕಾರ ರೈತರಿಗೆ ಬೀಜ, ರಸಗೊಬ್ಬರ ಬೆಲೆ ಏರಿಸಿದೆ. 960 ರೈತರು ಸಾಲದಿಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿಯಿಲ್ಲ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ಐದು ಉಚಿತ ಗ್ಯಾರೆಂಟಿಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಆಪಾದಿಸಿದರು.
ಇದನ್ನೂ ಓದಿ: ಮೊಬೈಲ್ ಗೀಳಿನಿಂದ ಹೊರ ಬನ್ನಿ | ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ
ಹುಬ್ಬಳ್ಳಿಯಲ್ಲಿ ಹಾಡು ಹಗಲೆ ವಿದ್ಯಾರ್ಥಿನಿ ನೇಹ ಹತ್ಯೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಇದಕ್ಕೆ ಕಾರಣ. ಪರಿಶಿಷ್ಠ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ಕೋಟ್ಯಾಂತರ ರೂ.ಗಳ ಅವ್ಯವಹಾರವಾಗಿದೆ. ಒಟ್ಟಾರೆ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಜೂ.28 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದೆಂದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಸಿದ್ದಾಪುರ, ಕೆ.ಸಂಪತ್ಕುಮಾರ್, ರೈತ ಮೋರ್ಚ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್ಬೇದ್ರೆ ಸೇರಿದಂತೆ ಮುಖಂಡರು ಕಾರ್ಯಕರ್ತರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
