CHITRADURGA NEWS | 15 JUNE 2024

ಚಿತ್ರದುರ್ಗ: ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ 302 ಹಾಗೂ 2024-25 ನೇ ಸಾಲಿನಲ್ಲಿ ಇದುವರೆಗೂ 28 ಬಾಲಗರ್ಭಿಣಿಯರ ಪ್ರಕರಣಗಳು ಬೆಳಕಿಗೆ ಬಂದಿರುವುದು ಕಳವಕಾರಿ ಸಂಗತಿಯಾಗಿದೆ. ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಬಾಲ ಗರ್ಭಿಣಿಯರ ರಕ್ಷಣೆ ಮಾಡುವ ಕೆಲಸ ಮಾಡಬೇಕು ಎಂದು ರಾಜ್ಯ ಮಕ್ಕಳ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಸೂಚನೆ ನೀಡಿದರು.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ | ಮಗ ಪೊಲೀಸ್ ವಶಕ್ಕೆ | ತಂದೆ ಲೋ ಬಿಪಿಯಿಂದ ಸಾವು

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಶಾಲೆ ಕಾಲೇಜು, ಹಾಸ್ಟೆಲ್ ಗೋಡೆಗಳ ಮೇಲೆ ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೋಡೆ ಬರಹ ಬರೆಸಬೇಕು. ಬಾಲ್ಯ ವಿವಾಹ ನಿಷೇದ ಕಾಯ್ದೆ, ಪೋಕ್ಸೋ ಹಾಗೂ ಮಕ್ಕಳ ರಕ್ಷಣೆ ವಿಷಯಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ 2023-24ನೇ ಸಾಲಿನ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಇದನ್ನೂ ಓದಿ: ದೇವರ ಎತ್ತುಗಳ‌ ನಿರ್ವಹಣೆಗೆ ಟ್ರಸ್ಟ್ ರಚಿಸಲು ಪ್ರೇರೇಪಿಸಿ | ADC ಕುಮಾರಸ್ವಾಮಿ

ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಮಕ್ಕಳ ಜಿಲ್ಲಾ ರಕ್ಷಣಾ ಘಟಕದ ಅಧ್ಯಕ್ಷ ಡಾ.ಸಿ.ಪ್ರಭಾಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತ.ಸಿ ಉಪಸ್ಥಿತರಿದ್ದರು.