CHITRADURGA NEWS | 18 MARCH 2026
ಚಿತ್ರದುರ್ಗ: ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯ ನೆಲ ಗೋಡಂಬಿ ಬೆಳೆಗೆ ಸೂಕ್ತವಾಗಿದೆ ಎಂದು ತೋಟಗಾರಿಕೆ ಮಹಾವಿದ್ಯಾಲಯ ಜಿ.ಕೆ.ವಿ.ಕೆ. ಬೆಂಗಳೂರಿನ ನಿವೃತ್ತ ಡೀನ್ ಡಾ.ಕೆ.ಜಿ.ಎಸ್.ಸ್ವಾಮಿ ತಿಳಿಸಿದರು.
ಇದನ್ನೂ ಓದಿ: ಹರಿಹರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಯತ್ನ | ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೆಂಗಳೂರು, ಗೋಡಂಬಿ ಮತ್ತು ಕೋಕೋ ಅಭಿವೃದ್ದಿ ನಿರ್ದೇಶನಾಲಯ ಕೊಚಿನ್ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆ ಪ್ರಾದೇಶಿಕ ಘಟಕ ಇವುಗಳ ಸಹಯೋಗದೊಂದಿಗೆ ಎ.ಪಿ.ಎಂ.ಸಿ. ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗೋಡಂಬಿ ಬೆಳೆಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ವಾಣಿಜ್ಯ ಬೆಳೆಗಳಾದ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ, ಈರುಳ್ಳಿ ಇವುಗಳನ್ನೆ ಹೆಚ್ಚು ಬೆಳೆಯುವ ರೈತರು ಗೋಡಂಬಿ ಬೆಳೆಯತ್ತ ಗಮನ ಕೊಡಬೇಕು. ಇದೊಂದು ಲಾಭದಾಯಕ ಬೆಳೆ. ಬರಪೀಡಿತ ಪ್ರದೇಶ ಚಿತ್ರದುರ್ಗದ ಹವಾಗುಣ ಗೋಡಂಬಿ ಬೆಳೆಗೆ ಚೆನ್ನಾಗಿದೆ ಎಂದು ಹೇಳಿದರು.
ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನಿವೃತ್ತ ಸಂಶೋಧನಾ ನಿರ್ದೇಶಕರಾದ ಡಾ.ಬಿ.ಸತ್ಯನಾರಾಯಣರೆಡ್ಡಿ ಮಾತನಾಡಿ, ಗೋಡಂಬಿ ಚಿತ್ರದುರ್ಗ ಜಿಲ್ಲೆಯ ರೈತರಿಗೊಂದು ಪರ್ಯಾಯ ಬೆಳೆಯಾಗಿ ರೂಪುಗೊಳ್ಳುತ್ತ ಬರುತ್ತಿದೆ. ಕಡಿಮೆ ಖರ್ಚಿನಲ್ಲಿ ಬೆಳೆಯುವ ಗೋಡಂಬಿಗೆ ಹೆಚ್ಚಿನ ಕೂಲಿಕಾರರ ಅವಶ್ಯಕತೆಯೂ ಇಲ್ಲ. ಕೇವಲ ವಾಣಿಜ್ಯ ಬೆಳೆಗಳಿಗೆ ಮಾರು ಹೋಗುವ ಬದಲು ಗೋಡಂಬಿ ಬೆಳೆಯನ್ನು ಆಯ್ಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು..
ಇದನ್ನೂ ಓದಿ: ಕೂನಬೇವು ಗ್ರಾಮದಲ್ಲಿ ಬಯೋಡೈಜೆಸ್ಟರ್ ಕಾರ್ಯಾಗಾರ
ಗೋಡಂಬಿ ತಜ್ಞ ಬೆಂಗಳೂರಿನ ಡಾ.ಗುರುಪ್ರಸಾದ್, ಗೋಡಂಬಿ ಸಂಶೋಧನಾ ನಿರ್ದೇಶನಾಲಯದ ಹಿರಿಯ ವಿಜ್ಞಾನಿ ಡಾ.ರಾಜಶೇಖರ್, ಚಿತ್ರದುರ್ಗ ಕೃಷಿ ತಂತ್ರಜ್ಞರ ಸಂಸ್ಥೆ ಉಪಾಧ್ಯಕ್ಷ ಡಿ.ಟಿ.ಶಿವಾನಂದಪ್ಪ, ಕಾರ್ಯದರ್ಶಿ ಜಿ.ಟಿ.ವೀರಭದ್ರರೆಡ್ಡಿ, ತೋಟಗಾರಿಕೆ ಮಹಾವಿದ್ಯಾಲಯ ಜಿ.ಕೆ.ವಿ.ಕೆ.ಬೆಂಗಳೂರಿನ ಡಾ.ಸುರೇಶ್ ಜಿ.ಜೆ, ಅಶೋಕ್ ಟಿ.ಎಲ್, ಟಿ.ಆರ್.ಯಶವಂತಕುಮಾರ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ದೇವರಾಜ್, ವಿರುಪಾಕ್ಷಪ್ಪ, ಎನ್.ಕುಮಾರ್ ಇನ್ನು ಅನೇಕರು ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು.
ಗೋಡಂಬಿ ಬೆಳೆಯ ಕೊಯ್ಲೋತ್ತರ ನಿರ್ವಹಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಕುರಿತು ಗೋಡಂಬಿ ಬೆಳೆಗಾರರು ಕೇಳಿದ ಪ್ರಶ್ನೆಗಳಿಗೆ ಗೋಡಂಬಿ ತಜ್ಞರು ಉತ್ತರಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

