ಮುಖ್ಯ ಸುದ್ದಿ
PLD ಬ್ಯಾಂಕ್ ಚುನಾವಣೆ | ಅಧ್ಯಕ್ಷರಾಗಿ ಶಿವಪ್ರಸಾದ್, ಉಪಾಧ್ಯಕ್ಷರಾಗಿ ಶರಣಪ್ಪ ಆಯ್ಕೆ
CHITRADURGA NEWS | 31 JANUARY 2025
ಚಿತ್ರದುರ್ಗ: ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ(PLD) ಬ್ಯಾಂಕ್‌ನ ಅಧ್ಯಕ್ಷರ, ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಪಿ.ಜೆ.ಶಿವಪ್ರಸಾದ್, ಉಪಾಧ್ಯಕ್ಷರಾಗಿ ಎಂ.ಎನ್.ಶರಣಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Also Read: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಭೆ ಫೆ.04ಕ್ಕೆ | ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಿ
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಚುನಾವಣೆಯ ಅಧ್ಯಕ್ಷರ ಸ್ಥಾನಕ್ಕೆ ಪಿ.ಜೆ.ಶಿವಪ್ರಸಾದ್, ಉಪಾಧ್ಯಕ್ಷರ ಸ್ಥಾನಕ್ಕೆ ಎಂ.ಎನ್.ಶರಣಪ್ಪ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಇಬ್ಬರು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಪ್ರಕಟಿಸಿದ್ದಾರೆ.
ನೂತನ ಅಧ್ಯಕ್ಷ ಪಿ.ಜೆ.ಶಿವಪ್ರಸಾದ್ ಮಾತನಾಡಿ, ಸಂಸ್ಥೆಯಲ್ಲಿ ಸದಸ್ಯತ್ವ ಹೊಂದಿರುವ ತಾಲೂಕಿನ ರೈತರಿಗೆ ಪಿಎಲ್‌ಡಿ ಬ್ಯಾಂಕ್ ಮೂಲಕ ಸಿಗಬಹುದಾದ ಸರ್ಕಾರದ ವಿವಿಧ ಬಗೆಯ ಸಾಲ ಸವಲತ್ತು ತಲುಪಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.
ಅವಿರೋಧ ಆಯ್ಕೆಯಾಗುತ್ತಿದ್ದಂತೆ ಬ್ಯಾಂಕ್‌ನ ಮುಂಭಾಗದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸುವ ಮೂಲಕ ವಿಜಯೋತ್ಸವ ಆಚರಿಸಿದರು.
Also Read: ಕುಂಭ ಮೇಳದಲ್ಲಿ ಚಿತ್ರದುರ್ಗ ಮೂಲದ ನಾಗಾಸಾಧು ನಿಧನ
ಈ ವೇಳೆ ನಿರ್ದೇಶಕ ಜೆ.ಶಿವಪ್ರಕಾಶ್, ಕೆ.ಆರ್.ರವಿ, ಪಿ.ಎಸ್.ಜಗದೀಶ್, ಎನ್.ಎಸ್.ಮಾರುತಿ, ವನಜಾಕ್ಷಮ್ಮ, ಹೆಚ್.ಸಿ.ವಿಜಯಕುಮಾರ್, ಮಣ್ಣೆರು ನಾಗಪ್ಪ, ಕೆ.ಸಿ.ಮೌನೇಶ್, ಕೆ.ಎಸ್.ಸತೀಶ್, ಎನ್.ಆರ್.ಕೋಟ್ರೇಶ್, ಪದ್ಮ, ಕೆ.ಜೆ.ಸುನೀಲ್ ಇದ್ದರು.