CHITRADURGA NEWS | 02 AUGUST 2024
ಚಿತ್ರದುರ್ಗ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಯುವಕನೊಬ್ಬನ ವಿರುದ್ಧ ಪೋಕ್ಸೊ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಹಿರಿಯೂರು ತಾಲ್ಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ಆರೋಪಿಯು ಬಾಲಕಿಯೊಂದಿಗೆ ಸ್ನೇಹ ಬೆಳೆಸಿದ್ದಾನೆ. ಬಳಿಕ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ.
ಇದನ್ನೂ ಓದಿ: ಗುಡಿಸಲಿಗೆ ಬಿತ್ತು ಬೆಂಕಿ | ಬೀದಿಗೆ ಬಿದ್ದ ಮೂರು ಕುಟುಂಬ

ಕೆಲ ದಿನಕ್ಕೆ ಆಕೆಗೆ ಗರ್ಭಿಣಿಯಾಗಿರುವುದು ತಿಳಿದ ಬಳಿಕ ಮದುವೆ ಆಗುವಂತೆ ಯುವಕನನ್ನು ಒತ್ತಾಯಿಸಿದ್ದಾಳೆ. ಆಗ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾನೆ.
ಈ ಸಂಬಂಧ ಸಂತ್ರಸ್ತ ಬಾಲಕಿಯು ಹಿರಿಯೂರು ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
