ಕ್ರೈಂ ಸುದ್ದಿ
ಮುರುಘಾ ಶರಣರ ಪೋಕ್ಸೋ ಪ್ರಕರಣ | ಚಾರ್ಜ್‍ಶೀಟ್ ಮರು ನಿಗಧಿ

CHITRADURGA NEWS | 31 MAY 2024
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಸಿಲುಕಿ ಬಂಧಿತರಾದ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಎರಡು ಪ್ರತ್ಯೇಕ ಚಾರ್ಜ್‍ಶೀಟ್ ಸಲ್ಲಿಸಿದ್ದರು.
ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಗಳನ್ನು ಸೇರಿಸಲಾಗಿತ್ತು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಮತ ಎಣಿಕೆ ಕಾರ್ಯಕ್ಕೆ ದಿನಗಣನೆ | ಮಧ್ಯಾಹ್ನದೊಳಗೆ ಫಲಿತಾಂಶ ಘೋಷಣೆ ಸಾಧ್ಯತೆ
ಈ ಹಿನ್ನೆಲೆಯಲ್ಲಿ ಶಿವಮೂರ್ತಿ ಮುರುಘಾ ಶರಣರು ತಮ್ಮ ಮೇಲೆ ನಿಗಧಿ ಮಾಡಿರುವ ದೋಷಾರೋಪ(charge sheet) ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.
ಇಂದು ಮೇ.31 ಶುಕ್ರವಾರ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತೆ ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣ ಕೈಗೆತ್ತಿಕೊಂಡು, ದೋಷಾರೋಪ ಮರುನಿಗಧಿ (Re-framing) ಮಾಡಲಾಯಿತು.
ಇದನ್ನೂ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ | ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭ
ಶ್ರೀಗಳ ವಿರುದ್ಧ ತನಿಖೆ ನಡೆಸಿ ಸಲ್ಲಿಕೆ ಮಾಡಿದ್ದ ಚಾರ್ಜ್‍ಶೀಟ್‍ನಲ್ಲಿದ್ದ ಪರಿಶಿಷ್ಟ ಜಾತಿ, ಪಂಗಡದ ಮೇಲಿನ ದೌರ್ಜನ್ಯ ತಡೆ ಹಾಗೂ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಗಳನ್ನು ಕೈಬಿಟ್ಟು ಪೋಕ್ಸೋ ಪ್ರಕರಣ ಉಳಿಸಲಾಗಿದೆ.
ಪ್ರಕರಣದಲ್ಲಿ ಕ್ರಮವಾಗಿ ಒಂದರಿಂಧ ಮೂರನೇ ಆರೋಪಿಗಳಾಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು, ವಾರ್ಡನ್ ರಶ್ಮಿ ಹಾಗೂ ವಿದ್ಯಾಪೀಠದ ಕಾರ್ಯದರ್ಶಿ ಪರಮಶಿವಯ್ಯ ಅವರು ದೋಷಾರೋಪಗಳನ್ನು ನಿರಾಕರಿಸಿದ್ದು, ಶುದ್ಧ ಸುಳ್ಳು ಎಂದಿದ್ದಾರೆ.
ಇದನ್ನೂ ಓದಿ: ಮುರುಘಾ ಶ್ರೀ ಪ್ರಕರಣದ ಸಾಕ್ಷಿಯಾಗಿದ್ದ ಬಾಲಕಿ ಚಿಕ್ಕಪ್ಪನ ವಿರುದ್ಧ ದೂರು ದಾಖಲು
ಪ್ರಕರಣದ ವಿಚಾರಣೆಯನ್ನು ಜೂ.3ಕ್ಕೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ ಹಡಪದ ಮುಂದೂಡಿದ್ದಾರೆ.
