CHITRADURGA NEWS | 28 OCTOBER 2025
ಚಿತ್ರದುರ್ಗ: ಬಲವಂತವಾಗಿ 18 ವರ್ಷದ ಒಳಗಿನ ಹೆಣ್ಣು ಮಕ್ಕಳನ್ನು ಮದುವೆಯಾದರೆ ಅಂತಹವರ ವಿರುದ್ದ ಪೋಕ್ಸೋ ಹಾಗೂ ಅಪರಣ ಪ್ರಕರಣ ದಾಖಲಿಸುವುದಾಗಿ ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ಹೇಳಿದರು.

ಇದನ್ನೂ ಓದಿ: ನಾಳೆ ಅಂತರ-ಪೀಳಿಗೆಯ ಬಾಂಧವ್ಯ ಮೇಳ | ಜೆ.ವೈಶಾಲಿ
ಮಂಗಳವಾರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ, ಆಯೋಜಿಸಲಾದ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ದಿನದಿಂದ ದಿನಕ್ಕೆ ಅಧಿಕವಾಗುತ್ತಿವೆ. ಇದರಲ್ಲಿಯೂ ಬಾಲಕಿಯರ ಅಪಹರಣ ಸಂಖ್ಯೆ ಅಧಿಕವಾಗಿರುವುದು ಕಳವಳಕಾರಿಯಾಗಿದೆ. ಇಂತಹ ಪ್ರಕರಣಗಳ ಪೈಕಿ ಚಿತ್ರದುರ್ಗ ಜಿಲ್ಲೆ 5 ಸ್ಥಾನದಲ್ಲಿರುವು ಬೇಸರದ ಸಂಗತಿಯಾಗಿದೆ.
ಶಾಲಾ ಕಾಲೇಜುಗಳಲ್ಲಿ ಮಹಿಳಾ ಶಿಕ್ಷಕಿ ಹಾಗೂ ಉಪನ್ಯಾಸಕಿಯರು ಬಾಲ್ಯ ವಿವಾಹ, ಪೋಕ್ಸೋ ಸೇರಿದಂತೆ ಸಾಮಾಜಿಕ ಪಿಡುಗುಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ನ್ಯಾಯಾಧೀಶ ಎಂ.ವಿಜಯ್ ಹೇಳಿದರು.
ಇದನ್ನೂ ಓದಿ: ನವೆಂಬರ್ 12 ರಿಂದ ಚಿತ್ರದುರ್ಗದಲ್ಲಿ ಸ್ವದೇಶಿ ಮೇಳ | ಪೋಸ್ಟರ್ ಬಿಡುಗಡೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್.ವಿಜಯಕುಮಾರ್ ಮಾತನಾಡಿ ಹೆಣ್ಣು ಮಕ್ಕಳು ಹುಟ್ಟಿದರೆ ಬೇಸರ ಪಡುವ ಸಂಗತಿಯಿದೆ. ಜಿಲ್ಲೆಯಲ್ಲಿ ನವಜಾತ ಹೆಣ್ಣುಶಿಶುಗಳನ್ನು ಕಸದತೊಟ್ಟಿ, ರಸ್ತೆಬದಿ, ಆಸ್ಪತ್ರೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳು ಬಿಟ್ಟು ಅನಾಥರನ್ನಾಗಿಸುತ್ತಿರುವುದು ದುಃಖಕರ ಸಂಗತಿಯಾಗಿದೆ. ಹೆಣ್ಣುಮಕ್ಕಳ ಅಪಹರಣ ಹಾಗೂ ಬಾಲ್ಯವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ ಜಿಲ್ಲೆಯಲ್ಲಿ ಸರಾಸರಿ 1000 ಗಂಡು ಮಕ್ಕಳಿಗೆ 962 ಹೆಣ್ಣುಮಕ್ಕಳಿರುವುದು ಹಲವು ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗಿದೆ. ಹೆಣ್ಣು ಮಕ್ಕಳ ಜನನ ಸಂಖ್ಯೆ ಕ್ಷೀಣಿಸುತ್ತಿದೆ. ಪೋಷಕರು ಹೆಣ್ಣು ಗಂಡು ಎಂಬ ಭೇದ ಭಾವದ ತಾರತಮ್ಯವನ್ನು ಬಯಸದೇ ಸಮಾನ ಮನಸ್ಥಿತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ತಿಮ್ಮಯ್ಯ, ಬಸವೇಶ್ವರ ಆಸ್ಪತ್ರೆಯ ಡಾ.ರಶ್ಮಿ, ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷೆ ಶೀಲಾ.ಪಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ಹತ್ತಿ ರೇಟ್ ಎಷ್ಟಿದೆ?
ಹಿರಿಯ ನಾಗರೀಕರ ಸಬಲೀಕರಣ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಎ.ಸಣ್ಣಪಾಲಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ. ಪ್ರೇಮಮೂರ್ತಿ ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
