CHITRADURGA NEWS | 06 MARCH 2024
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿರುವ ₹ 5,300 ಕೋಟಿ ಅನುದಾನ ಮಂಜೂರು ಮಾಡುವಂತೆ ಕಳೆದ ಒಂದು ತಿಂಗಳಿನಿಂದ ರೈತರು ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಸಂಸದ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಕಚೇರಿ ಬಳಿ ಧರಣಿ ನಡೆಸುತ್ತಿದ್ದಾರೆ. ಆದರೂ, ಈವರೆಗೆ ಕೇಂದ್ರದಿಂದ ಯವುದೇ ರೀತಿಯ ಸ್ಪಂದನೆ ದೊರೆತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗೂ ವೇಗ ದೊರೆತಿಲ್ಲ.

ಈ ಹಿನ್ನೆಲೆಯಲ್ಲಿ ಇಂದು (ಬುಧವಾರ) ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಕೇಂದ್ರ ಪುರಸ್ಕೃತ ಯೋಜನೆಗಳ (ದಿಶಾ) ಸಭೆ ನಡೆಯದಂತೆ ತಡೆಯುವ ಉದ್ದೇಶದಿಂದ ರಾತ್ರೋರಾತ್ರಿ ಹತ್ತಾರು ಟ್ರ್ಯಾಕ್ಟರ್ ಗಳನ್ನು ತಂದು ಜಿಲ್ಲಾ ಪಂಚಾಯಿತಿ ಕಚೇರಿಯ ಎರಡೂ ಗೇಟ್‌ಗಳಿಗೆ ರೈತರು ಅಡ್ಡ ನಿಲ್ಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗಾಬರಿಯಿಂದ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಟ್ರ್ಯಾಕ್ಟರ್ ತೆರವು ಮಾಡುವಂತೆ ರೈತರ ಮನವೊಲಿಸಲು ಹರಸಾಹಸ ಮಾಡಿದರು.
ಕ್ಲಿಕ್ ಮಾಡಿ ಓದಿ: https://chitradurganews.com/collection-of-%e2%82%b9-38-lakh-in-four-months/
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ನೇತೃತ್ವದಲ್ಲಿ ಪೊಲೀಸರು ಟ್ರ್ಯಾಕ್ಟರ್‌ಗಳನ್ನು ತಳ್ಳಲು ಯತ್ನಿಸಿದಾಗ ರೈತರು ಅಡ್ಡ ಮಲಗಿ ಪ್ರತಿಭಟಿಸಿದರು. ಪೊಲೀಸರು ರೈತರನ್ನು ಪಕ್ಕಕ್ಕೆ ಎಳೆದು ಗೇಟ್ ಮುಂದಿದ್ದ ಟ್ರ್ಯಾಕ್ಟರ್ ಗಳನ್ನು ಸರಿಸಿದರು.
ಇಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 100 ಬೆಡ್ ಗಳ ತಾಯಿ ಮಕ್ಕಳ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟಿಸುವ ಸಚಿವ ಎ.ನಾರಾಯಣಸ್ವಾಮಿ, ಬೆಳಗ್ಗೆ 11 ಗಂಟೆಗೆ ದಿಶಾ ಸಭೆ ನಡೆಸಲಿದ್ದಾರೆ.
ಕಳೆದ 31 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಗಮನಹರಿಸಿ ಜಿಲ್ಲೆಯ ರೈತರಿಗೆ ಅನುಕೂಲ ಆಗುವ ಭದ್ರಾಗೆ ಅನುದಾನ ಬಿಡುಗಡೆ ಮಾಡಿಲ್ಲ. ಹೀಗಾಗಿ ಸಭೆ ನಡೆಸಲು ಬಿಡಬಾರದು ಎಂದು ತೀರ್ಮಾನಿಸಿದ್ದೇವು. ಸರ್ಕಾರ ಪೊಲೀಸ್ ಬಲ ಪ್ರಯೋಗಿಸಿ, ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸಮಾಡುತ್ತಿದೆ.
| ಈಚಘಟ್ಟ ಸಿದ್ದವೀರಪ್ಪ, ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
