
CHITRADURGA NEWS | 18 DECEMBER 2025
ಚಿತ್ರದುರ್ಗ: ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೆ ಮೈದಾನದ ಸಮೀಪದ ಶಾಂತಿ ಕಂಪರ್ಟ್ಸ್ ಲಾಡ್ಜ್‌ನಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಸತೀಶ ಎಂಬುವರು ಅಮಾಯಕ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು ಗಿರಾಕಿಗಳನ್ನು ಕರೆಯಿಸಿ ಮದ್ಯವರ್ತಿಗಳಾಗಿ ಕಾನೂನು ಬಾಹಿರವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಎಎಸ್‌ಪಿ ಡಾ.ಶಿವಕುಮಾರ್, ಡಿವೈಎಸ್‌ಪಿ ಪಿ.ಕೆ.ದಿನಕರ್ ಮಾರ್ಗದರ್ಶನದಲ್ಲಿ ಮಹಿಳಾ ಠಾಣೆ ವೃತ್ತ ನಿರೀಕ್ಷಕ ನಯೀಂ ಅಹಮದ್ .ಟಿ.ಆರ್ ಮತ್ತು ಸಿಬ್ಬಂದಿಗಳ ತಂಡ ಲಾಡ್ಜ್‌ನ ಮೇಲೆ ದಾಳಿ ನಡೆಸಿತ್ತು.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ | ನ್ಯಾಯಾಲಯಕ್ಕೆ ಹಾಜರಾದ ತಂದೆ – ತಾಯಿ
ಕಾನೂನು ಬಾಹಿರವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್‌ನ ಮಾಲೀಕರಾದ ಸತೀಶ ಮತ್ತು ಲಾಡ್ಜ್‌ನ ಮ್ಯಾನೇಜರ್ ಕೃಷ್ಣ ಅವರನ್ನು ಬಂದಿಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಕಾರ್ಯಾಚರಣೆ ನಡೆಸಿದ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಶ್ಲಾಘಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
