.
ಚಿತ್ರದುರ್ಗ ನ್ಯೂಸ್.ಕಾಂ: ಪೊಲೀಸ್ ಇಲಾಖೆಯು 2022-23ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್ (ಸಶಸ್ತ್ರ)-420 ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದು, ಸೆ.10 ರಂದು ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.
ಪೊಲೀಸ್ ಕಾನ್ಸ್‍ಟೇಬಲ್ (ಸಶಸ್ತ್ರ) ಒಟ್ಟು 420 ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ 2022 ಸೆಪ್ಟಂಬರ್ 12 ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿ, ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿತ್ತು. ಈ ನಿಟ್ಟಿನಲ್ಲಿ ಈಗಾಗಲೇ 5760 ಅಭ್ಯರ್ಥಿಗಳು ಜಿಲ್ಲೆಯಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಅರ್ಹ ಅಭ್ಯರ್ಥಿಗಳು ನಿಯಮಾನುಸಾರ ಸೆ.10 ರಂದು ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿನ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಹಾಜರಾಗಬೇಕು. ಅಭ್ಯರ್ಥಿಗಳು ಯಾವುದೇ ರೀತಿಯ ಪುಸ್ತಕ, ಕೈಬರಹದ ಚೀಟಿಗಳು, ಪೇಜರ್, ಕ್ಯಾಲ್ಕುಲೇಟರ್, ಇಯರ್ ಫೋನ್, ಮೊಬೈಲ್‍ಗಳನ್ನು ಪರೀಕ್ಷೆಗೆ ತರುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಎಸ್ಪಿಯಾಗಿ ಧಮೇಂದರ್ ಕುಮಾರ್ ಮೀನಾ
ಅಭ್ಯರ್ಥಿಗಳು ಬೆಲೆ ಬಾಳುವ ವಸ್ತುಗಳು, ಸಾಮಾಗ್ರಿಗಳನ್ನು ತರದಂತೆ ತಿಳಿಸಲಾಗಿದ್ದು, ತಮ್ಮ ವಸ್ತುಗಳಿಗೆ ತಾವೇ ಜವಾಬ್ದಾರರು. ಲಿಖಿತ ಪರೀಕ್ಷೆಗೆ ಅಭ್ಯರ್ಥಿಗಳು ಕರೆಪತ್ರವನ್ನು ಅಧಿಕೃತ ವೆಬ್‍ಸೈಟ್ hಣಣಠಿs://ಞsಠಿ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ hಣಣಠಿs://ಞsಠಿಡಿeಛಿಡಿuiಣmeಟಿಣ.iಟಿ ನಿಂದ ಡೌನ್‍ಲೋಡ್ ಮಾಡಿಕೊಳ್ಳಲು ತಿಳಿಸಲಾಗಿದೆ. ಅಭ್ಯರ್ಥಿಗಳು ಕರೆ ಪತ್ರದಲ್ಲಿ ನಮೂದಿತವಾಗಿರುವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾಗಬೇಕು ಹಾಗೂ ಕರೆಪತ್ರದಲ್ಲಿ ನಮೂದಿಸಿರುವ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.
https://chat.whatsapp.com/EQUQpKalYFT1fVcJDTDjCk)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
