CHITRADURGA NEWS | 18 JULY 2026
ಚಿತ್ರದುರ್ಗ: ಯುವ ಪೀಳಿಗೆಯನ್ನು ಬಲಿ ತೆಗೆದುಕೊಳ್ಳುತ್ತಿರುವ ಮಾದಕ ವಸ್ತುಗಳ ದುಷ್ಟ ಜಾಲದ ವಿರುದ್ಧ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಸಮರ ಸಾರಿದೆ. ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ‘ಆಪರೇಷನ್ ರೈಸ್’ ಮತ್ತು ‘ಬೇಡ ಬ್ರೋ’ ಎಂಬ ವಿನೂತನ ಘೋಷಣೆಗಳೊಂದಿಗೆ ಬೃಹತ್ ಮಾದಕ ವಸ್ತು ವಿರೋಧಿಸಿ ಶುಕ್ರವಾರ ಜಾಗೃತಿ ಜಾಥಾವನ್ನು ನಡೆಸಲಾಯಿತು.
ಇದನ್ನೂ ಓದಿ: ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ | ಸಂಸದ ಗೋವಿಂದ ಕಾರಜೋಳ
ಜಾಥಾದಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಪಡೆಗಳು ಜೊತೆಯಾಗಿ ಹೆಜ್ಜೆ ಹಾಕಿದವು. ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಮದಕರಿ ನಾಯಕ ವೃತ್ತದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.
ಜಾಥಾವು ನಗರದ ಬಿ.ಡಿ.ರಸ್ತೆಯಲ್ಲಿನ ಅಂಬೇಡ್ಕರ್, ಮಹಾವೀರ, ಕಿತ್ತೂರು ಚನ್ನಮ್ಮ ವೃತ್ತಗಳ ಮೂಲಕ ಗಾಂಧಿ ವೃತ್ತವನ್ನು ತಲುಪಿತು. ಗಾಂಧಿ ಸರ್ಕಲ್‍ನಲ್ಲಿ ನೆರೆದಿದ್ದ ನೂರಾರು ವಿದ್ಯಾರ್ಥಿಗಳು, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಚಿತ್ರದುರ್ಗ ಜಿಲ್ಲೆ ನಿರ್ಮಾಣ ಮಾಡುವ ಕುರಿತು ಘೋಷಣೆಗಳನ್ನು ಕೂಗಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ರಂಜಿತ್ ಕುಮಾರ್ ಬಂಡಾರು ಅವರ ಬೇಡ ಬೇಡ ಧ್ವನಿಗೆ, ವಿದ್ಯಾರ್ಥಿಗಳು ಡ್ರಗ್ಸ್ ಬೇಡ ಎಂದು ಧ್ವನಿಗೂಡಿಸಿದರು.
ಈ ವೇಳೆ ಮಾದಕ ವಸ್ತುಗಳನ್ನು ಕಟ್ಟುನಿಟ್ಟಾಗಿ ವಿರೋಧಿಸುವ ಮತ್ತು ಅವುಗಳಿಂದ ದೂರ ಉಳಿಯುವ ಕುರಿತು, ಸ್ನೇಹಿತರು, ನೆರೆ ಹೊರೆಯವರನ್ನು ತಪ್ಪು ದಾರಿಗೆ ಹೋಗದಂತೆ ಎಚ್ಚರಿಸುವ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಇದನ್ನೂ ಓದಿ: ರೈಲ್ವೇ ಅಭಿವೃದ್ಧಿಗೆ ಭೂಮಿ ನೀಡುವ ರೈತರಿಗೆ ನಿಯಮಾನುಸಾರ ಪರಿಹಾರ ನೀಡಿ
ಜಾಥಾದಲ್ಲಿ ಪೊಲೀಸ್ ಉಪಾಧೀಕ್ಷಕರುಗಳಾದ ಅರುಣ್ ನಾಗೇಗೌಡ, ಶ್ರೀನಿವಾಸ್, ಸತ್ಯನಾರಾಯಣ್ ಸೇರಿದಂತೆ ಪೊಲೀಸ್ ವೃತ್ತ ನಿರೀಕ್ಷರು, ಕಾಲೇಜು ಉಪನ್ಯಾಸಕರು, ಸ್ವಯಂ ಸೇವಾ ಸಂಸ್ಥೆಗಳ ಕಾರ್ಯಕರ್ತರು ಹಾಗೂ ಇತರೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

