ಮುಖ್ಯ ಸುದ್ದಿ
ಕೆಡಿಪಿ ಸಭೆ ಮುಂದೂಡಿಕೆ ಹಿಂದೆ ರಾಜಕೀಯ ಲೆಕ್ಕಚಾರ | ಸರಳವಾಗಿ ಬಿಡಿಸಿಟ್ಟ ಸಂಸದ ಗೋವಿಂದ ಎಂ.ಕಾರಜೋಳ
CHITRADURGA NEWS | 17 JUNE 2024
ಚಿತ್ರದುರ್ಗ: ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಕೋನದಿಂದ ನಡೆಯುವ ಜಿಲ್ಲಾ ಪಂಚಾಯಿತಿ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಹಿಂದಿದೆ ರಾಜಕೀಯ ಲೆಕ್ಕಚಾರ. ಇದನ್ನು ಸರಳವಾಗಿ ಬಿಡಿಸಿಟ್ಟರು ಸಂಸದ ಗೋವಿಂದ ಎಂ.ಕಾರಜೋಳ.
‘ಕಳೆದ ನಾಲ್ಕು ತಿಂಗಳಿಂದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಸಚಿವರು ನಿಷ್ಕ್ರಿಯರಾಗಿದ್ದಾರೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ನಾನು ಕೆಡಿಪಿ ಸಭೆಯಲ್ಲಿ ಭಾಗವಹಿಸಬಾರದು ಎಂಬ ಕಾರಣಕ್ಕೆ ಕೆಡಿಪಿ ಸಭೆ ಮುಂದೂಡಿದ ಬುದ್ದಿವಂತಿಕೆ ಮಾಡಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಕ್ಲಿಕ್ ಮಾಡಿ ಓದಿ: ರೇಣುಕಾಸ್ವಾಮಿ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ
‘ಲೋಕಸಭೆ ಅಧಿವೇಶನ ಪ್ರಾರಂಭದ ಸಮಯಕ್ಕೆ ಸಭೆ ನಿಗಧಿ ಮಾಡಿದ್ದಾರೆ. ನನ್ನನ್ನು ಹೊರತುಪಡಿಸಿ ಕೆಡಿಪಿ ಸಭೆ ಮಾಡುವುದಿದ್ದರೆ ಮಾಡಿ. ಆದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಕೋನದಿಂದ ಲೋಕಸಭೆ ಅಧಿವೇಶನ ಮುಗಿದ ಬಳಿಕ ಕೆಡಿಪಿ ಸಭೆ ನಡೆಸಿದರೆ ಉತ್ತಮ’ ಎಂದರು.
ಕ್ಲಿಕ್ ಮಾಡಿ ಓದಿ: ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿ | ರಂಭಾಪುರಿ ಶ್ರೀ ಒತ್ತಾಯ
ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯ್ಯಣ್ಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ಗೋಪಾಲಸ್ವಾಮಿ ನಾಯಕ, ಎಸ್.ಆರ್.ಗಿರೀಶ್, ಚಿದಾನಂದ್, ವೆಂಕಟೇಶ್ ಯಾದವ್, ಕಲ್ಲೇಶಯ್ಯ ಇದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜೂನ್ 19ರಂದು ಕರೆಯಲಾಗಿದ್ದ ಜಿಲ್ಲಾ ಪಂಚಾಯಿತಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 24ಕ್ಕೆ ಮುಂದೂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದರು.