CHITRADURGA NEWS | 12 AUGUST 2026
ಚಿತ್ರದುರ್ಗ: ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರಕ್ಕೂ ಸಚಿವ ಬಿ.ನಾಗೇಂದ್ರ ಅವರಿಗೂ ಸಂಬಂಧವಿಲ್ಲದಿದ್ದರೂ ಬಿಜೆಪಿ ನಾಯಕರು ವಿನಾಕಾರಣ ಅವರ ಗೌರವಕ್ಕೆ ಮಸಿ ಬಳಿಯುವ ಪ್ರಯತ್ನ ನಡೆಸುತ್ತಿದ್ದಾರೆ. ಇಂತಹ ಕೃತ್ಯವನ್ನು ಸಹಿಸುವುದಿಲ್ಲ; ಮುಂದಿನ ದಿನಗಳಲ್ಲಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್ ಎಚ್ಚರಿಸಿದರು.
ಇದನ್ನೂ ಓದಿ: ಮಳೆ ಕೊರತೆ | ಬಿತ್ತನೆ ವೈಫಲ್ಯ, ಮಧ್ಯಂತರ ಪರಿಹಾರಕ್ಕೆ ಶಿಫಾರಸ್ಸು ಮಾಡಿ | ರಘುಮೂರ್ತಿ
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಾಜಿ ಸಚಿವ ಜನಾರ್ದನ ರೆಡ್ಡಿ ಮೂಲಕ ಕಾಂಗ್ರೆಸ್ನ ಬಿ. ನಾಗೇಂದ್ರ ವಿರುದ್ಧ ಬಿ. ಶ್ರೀರಾಮುಲು ಅವರನ್ನು ಎತ್ತಿಕಟ್ಟಿ ವಾಲ್ಮೀಕಿ ಸಮುದಾಯದಲ್ಲಿ ಭಿನ್ನಾಭಿಪ್ರಾಯ ಮೂಡಿಸುವ ಕುತಂತ್ರ ನಡೆಸುತ್ತಿದ್ದಾರೆ. ಇದೊಂದು ರಾಜಕೀಯ ಪಿತೂರಿಯಾಗಿದ್ದು, ಇದರಿಂದ ಬಿಜೆಪಿ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದನ್ನು ಬಿಜೆಪಿ ನಾಯಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಾಲ್ಮೀಕಿ ಸಮುದಾಯದಲ್ಲಿ ಒಡಕು ಮೂಡಿಸುವ ತಂತ್ರಗಾರಿಕೆ ನಡೆಸುತ್ತಿದ್ದಾರೆ. ವಾಲ್ಮೀಕಿ ಸಮುದಾಯ ನಾಗೇಂದ್ರ ಅವರ ಬೆಂಬಲಕ್ಕೆ ನೈತಿಕವಾಗಿ ನಿಲ್ಲಲಿದೆ ಎಂದರು.
ನಾಯಕ ಸಮಾಜದ ಮುಖಂಡ ಬಸವರಾಜ್ ಬಚ್ಚಬೋರನಹಟ್ಟಿ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಳಸಿಕೊಂಡು ಸಚಿವ ಬಿ. ನಾಗೇಂದ್ರ ವಿರುದ್ಧ ಶ್ರೀರಾಮುಲು ಅವರನ್ನು ಎತ್ತಿಕಟ್ಟುವ ಕೀಳು ಮಟ್ಟದ ರಾಜಕಾರಣ ಮಾಡಬಾರದು ಎಂದು ಹೇಳಿದರು.
ಇದನ್ನೂ ಓದಿ: ಹೊಸದುರ್ಗ | ಭಾರತ್ ಜೋಡೊ ಯುವ ಸಂಘ ಸ್ಥಾಪಿಸಲು ಅರ್ಜಿ ಅಹ್ವಾನ
ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಎಸ್ಐಟಿ ಕ್ಲೀನ್ಚಿಟ್ ನೀಡಿದೆ. ಇದನ್ನು ಸಹಿಸಿಕೊಳ್ಳದೆ ವಾಲ್ಮೀಕಿ ಸಮುದಾಯದ ಒಗ್ಗಟ್ಟು ಮುರಿಯುವ ಪ್ರಯತ್ನ ನಡೆಸುತ್ತಿರುವುದು ಸರಿಯಲ್ಲ. ಸಮುದಾಯದ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಬಿಜೆಪಿಯಲ್ಲಿ ಜೈಲಿಗೆ ಹೋಗಿ ಬಂದವರು ಸಾಕಷ್ಟು ಮಂದಿ ಇದ್ದಾರೆ. ಆದ್ದರಿಂದ ಇಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ: ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಕ ಮಾತ್ರೆ ಸೇವಿಸುವುದು ಅತ್ಯಗತ್ಯ
ಸುದ್ದಿಗೋಷ್ಠಿಯಲ್ಲಿ ವಾಲ್ಮೀಕಿ ಸಮುದಾಯದ ಶಶಿಧರ್, ಮಹಾಂತೇಶ್ ಪಾಳೆಗಾರ್, ಬೋರಯ್ಯ, ಚೇತನ್, ಸಾಧಿಕ್ ಯೂಸುಫ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

