ಲೋಕಸಮರ 2024
ಮತದಾನದ ಹಬ್ಬಕ್ಕೆ ಕಂಗೊಳಿಸುತ್ತಿವೆ ಮತಗಟ್ಟೆ | ಮತ ಚಲಾಯಿಸಿ ಸಂಭ್ರಮಿಸಿ
CHITRADURGA NEWS | 25 APRIL 2024
ಚಿತ್ರದುರ್ಗ: ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಲು ಸಿದ್ಧತೆಗಳು ಸಾಗಿದ್ದು, ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಮತದಾರರನ್ನು ಆಕರ್ಷಿಸಲು ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರನ್ನು ಆಕರ್ಷಿಸಲು 54 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಮಹಿಳಾ ಮತದಾರರನ್ನು ಉತ್ತೇಜಿಸಲು ಪ್ರತಿ ವಿಧಾನಸಭಾವಾರು ಮಹಿಳಾ ಮತದಾರರು ಹೆಚ್ಚಿರುವ 5 ಕಡೆ ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಮಹಿಳಾ ಅಧಿಕಾರಿ ಹಾಗೂ ಸಿಬ್ಬಂದಿ ಚುನಾವಣಾ ಕಾರ್ಯ ನಿರ್ವಹಿಸಲಿದ್ದಾರೆ.
ಕ್ಲಿಕ್ ಮಾಡಿ ಓದಿ: ವೋಟರ್ ಕಾರ್ಡ್ ಇಲ್ಲ ಅಂದ್ರು ವೋಟ್ ಮಾಡಿ | ಈ ದಾಖಲೆ ಇರಲಿ
ಮತದಾರರು ಮತದಾನ ಕೇಂದ್ರಕ್ಕೆ ಮತದಾನ ಮಾಡಲು ಆಗಮಿಸಿದಾಗ ಮತಗಟ್ಟೆ ಕೇಂದ್ರದಲ್ಲಿ ಮೂರು ಜನ ಮತಗಟ್ಟೆ ಅಧಿಕಾರಿಗಳಿದ್ದು, ಮತಗಟ್ಟೆ ಅಧಿಕಾರಿ 1 ಅವರ ಬಳಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಮತ್ತು ಮತದಾರರ ಗುರುತಿನ ಚೀಟಿಯನ್ನು ಪರಿಶೀಲಿಸಲಾಗುತ್ತದೆ. ನಂತರದಲ್ಲಿನ ಅಧಿಕಾರಿಗಳು ಕ್ರಮವಾಗಿ ಮತದಾರನ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಹಿಯ ಗುರುತನ್ನು ಹಾಕಿ, ಮತದಾನದ ಚೀಟಿ ನೀಡಿ ಸಹಿ ಪಡೆದುಕೊಳ್ಳಲಾಗುತ್ತದೆ.