
CHITRADURGA NEWS | 31 MAY 2024
ಚಿತ್ರದುರ್ಗ: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂನ್ 3ರಂದು ಬೆಳಿಗ್ಗೆ 8ಗಂಟೆಯಿಂದ ಸಂಜೆ 4ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಈ ಚುನಾವಣೆಗೆ ಚಿತ್ರದುರ್ಗ ಜಿಲ್ಲಾ ಕೇಂದ್ರದದಲ್ಲಿ 2ಮತಗಟ್ಟೆ ಹಾಗೂ ಉಳಿದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ತಲಾ 1 ಮತಗಟ್ಟೆ ಸೇರಿದಂತೆ ಒಟ್ಟು 7 ಮತಗಟ್ಟೆ ಸ್ಥಾಪಿಸಲಾಗಿದೆ’ ಎಂದರು.
‘ಮತದಾರರು ಮತಗಟ್ಟೆಯಲ್ಲಿ ಚುನಾವಣಾ ಆಯೋಗವು ನೀಡುವ ಪೆನ್ನನ್ನು ಬಳಸಿಕೊಂಡು 1, 2 ಮತ್ತು 3 ಆದ್ಯತಾ ಮತಗಳನ್ನು ನೀಡಲು ಅವಕಾಶವಿದೆ. ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಮತ ಚಲಾಯಿಸಲಿರುವ ಅರ್ಹ ಮತದಾರರಿಗೆ ಅಂದು ನಿಯಮಾನುಸಾರ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ’ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಮತ ಎಣಿಕೆ ಕಾರ್ಯಕ್ಕೆ ದಿನಗಣನೆ | ಮಧ್ಯಾಹ್ನದೊಳಗೆ ಫಲಿತಾಂಶ ಘೋಷಣೆ ಸಾಧ್ಯತೆ
‘ಜೂನ್ 2ರಂದು ಮಸ್ಟರಿಂಗ್ ಪ್ರಕ್ರಿಯೆ ನಡೆಯಲಿದೆ. ಜೂನ್ 3ರಂದು ಮತದಾನದ ನಂತರ ನಿಯಮಾನುಸಾರ ಜಿಲ್ಲಾ ಕೇಂದ್ರದಲ್ಲಿ ಡಿಮಸ್ಟರಿಂಗ್ ಪ್ರಕ್ರಿಯೆ ಪೂರ್ಣಗೊಳಿಸಿ, ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿಗೆ ರವಾನಿಸಲಾಗುತ್ತದೆ. ಜೂನ್ 6ರಂದು ಅಲ್ಲಿಯೇ ಮತಎಣಿಕೆ ಕಾರ್ಯ ನಡೆಯಲಿದೆ’ ಎಂದರು.
ಮೊಳಕಾಲ್ಮೂರು ತಾಲ್ಲೂಕಿನಲ್ಲಿ 222 ಪುರುಷರು ಹಾಗೂ 46 ಮಹಿಳೆಯರು ಸೇರಿದಂತೆ ಒಟ್ಟು 268 ಮತದಾರರು, ಚಳ್ಳಕೆರೆ ತಾಲ್ಲೂಕಿನಲ್ಲಿ 754 ಪುರುಷರು ಮತ್ತು 265 ಮಹಿಳೆಯರು ಸೇರಿದಂತೆ ಒಟ್ಟು 1019 ಮತದಾರರು ಚಿತ್ರದುರ್ಗ ತಾಲ್ಲೂಕಿನಲ್ಲಿ ಮತದಾರರಿಗಾಗಿ ನಗರದ ಸರ್ಕಾರಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ 1ರಲ್ಲಿ 489 ಪುರುಷರು ಮತ್ತು 292 ಮಹಿಳೆಯರು ಸೇರಿ ಒಟ್ಟು 781 ಮತದಾರರು ಹಾಗೂ ಕೊಠಡಿ ಸಂಖ್ಯೆ 2ರಲ್ಲಿ 501 ಪುರುಷರು ಮತ್ತು 322 ಮಹಿಳೆಯರು ಸೇರಿದಂತೆ ಒಟ್ಟು 823 ಮತದಾರರು, ಹಿರಿಯೂರು ತಾಲ್ಲೂಕಿನಲ್ಲಿ 601ಪುರುಷರು ಮತ್ತು 264ಮಹಿಳೆಯರು ಸೇರಿದಂತೆ ಒಟ್ಟು 865 ಮತದಾರರು ಇದ್ದಾರೆ.
ಹೊಸದುರ್ಗ ತಾಲ್ಲೂಕಿನಲ್ಲಿ 508 ಪುರುಷರು ಮತ್ತು 172 ಮಹಿಳೆಯರು ಸೇರಿದಂತೆ ಒಟ್ಟು 680 ಮತದಾರರು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 367 ಪುರುಷರು ಮತ್ತು 110 ಮಹಿಳೆಯರು ಸೇರಿದಂತೆ ಒಟ್ಟು 477 ಮತದಾರರು ಮತ ಚಲಾಯಿಸಲಿದ್ದಾರೆ. ಜಿಲ್ಲೆಯಲ್ಲಿ 3442 ಪುರುಷರು ಮತ್ತು 1471 ಮಹಿಳೆಯರು ಸೇರಿದಂತೆ ಒಟ್ಟು 4913 ಮತದಾರರು ಮತದಾನ ಮಾಡಲಿದ್ದಾರೆ ಎಂದು ವಿವರಿಸಿದರು.
ಕ್ಲಿಕ್ ಮಾಡಿ ಓದಿ: ಮದ್ಯಪ್ರಿಯರೇ ಗಮನಿಸಿ…ನಾಳೆಯಿಂದ ಮದ್ಯ ಮಾರಾಟ ಬಂದ್
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಮಾತನಾಡಿ, ‘ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚುನಾವಣಾ ಆಯೋಗದ ನಿಯಮ ಪಾಲಿಸದಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
