ಲೋಕಸಮರ 2024
ಬಿಜೆಪಿ ಮಹತ್ವದ ಸಭೆ | ಜಿಲ್ಲಾ ಪದಾಧಿಕಾರಿಗಳು, ಆಕಾಂಕ್ಷಿಗಳಿಂದ ಅಭಿಪ್ರಾಯ ಸಂಗ್ರಹ
CHITRADURGA NEWS | 3 MARCH 2024
ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಆಕಾಂಕ್ಷಿಗಳು ಹಾಗೂ ಪಕ್ಷದ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸುವ ಮೂಲಕ ಅಭ್ಯರ್ಥಿ ಅಂತಿಮಗೊಳಿಸುವ ಕೆಲಸ ಶುರುವಾಗಿದೆ.
ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಲಾಗಿದೆ. ಈ ಸಭೆಯ ನಂತರ ಜಿಲ್ಲಾ ಕೋರ್ ಕಮಿಟಿ ಸಭೆಯೂ ನಡೆದಿದೆ.
ಇದನ್ನೂ ಓದಿ: ತೀವ್ರ ವಿರೋಧದ ನಡುವೆಯೂ ಚಿತ್ರದುರ್ಗದಿಂದ ಕಚೇರಿ ಎತ್ತಂಗಡಿ
ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ರಾಜ್ಯ ವಕ್ತಾರರಾದ ಕೆ.ಎಸ್.ನವೀನ್ ಪಕ್ಷದ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳಿಂದ ಲೋಕಸಭೆಗೆ ಆಕಾಂಕ್ಷಿಗಳ ಕುರಿತು ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ.
ಪಕ್ಷದ ಬೇರೆ ಬೇರೆ ಕಾರ್ಯಕರ್ತರು ಕೆಲ ಆಕಾಂಕ್ಷಿಗಳಿಗೆ ಟಿಕೇಟ್ ಕೊಟ್ಟರೆ ಅನುಕೂಲವಾಗಲಿದೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಪಕ್ಷ ಯಾರಿಗೆ ಟಿಕೇಟ್ ಕೊಟ್ಟರೂ ಕೆಲಸ ಮಾಡಿ ಗೆಲ್ಲಿಸುತ್ತೇವೆ. ಬಿಜೆಪಿ ಅಭ್ಯರ್ಥಿ ಎನ್ನುವುದಷ್ಟೇ ನಮ್ಮ ಆಧ್ಯತೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಇದನ್ನೂ ಓದಿ: ಮುರುಘಾ ಮಠದ ಆಡಳಿತ ನಿರ್ವಹಣೆಗೆ ನಿವೃತ್ತ ಐಎಎಸ್ ಅಧಿಕಾರಿ
ಇನ್ನೂ ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೇಟ್ ಆಕಾಂಕ್ಷಿಗಳ ಜೊತೆಗೂ ಮಾತುಕತೆ ನಡೆಸಿದ್ದು, ಮಾಜಿ ಸಂಸದರಾದ ಜನಾರ್ದನಸ್ವಾಮಿ, ಮುಖಂಡರಾದ ಎಂ.ಸಿ.ರಘುಚಂದನ್, ಮೂಡಿಗೆರೆಯ ನರೇಂದ್ರ, ನಿವೃತ್ತ ಜಿಲ್ಲಾಧಿಕಾರಿ ಶ್ರೀರಂಗಯ್ಯ, ಡಾ.ರಮೇಶ್, ಸೂರನಹಳ್ಳಿ ವಿಜಯಣ್ಣ, ಭಾರ್ಗವಿ ದ್ರಾವಿಡ್ ಈ ಸಭೆಯಲ್ಲಿ ಆಕಾಂಕ್ಷಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಅಭ್ಯರ್ಥಿ ಅಂತಿಮಗೊಳಿಸುವ ಕಸರತ್ತು ಈಗಾಗಲೇ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಈ ಸಭೆ ಪ್ರಾಮುಖ್ಯತೆ ಪಡೆದಿದೆ.
ಇದನ್ನೂ ಓದಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಬೆಲೆ 459 ರೂ. ಹೆಚ್ಚಳ
ಸಭೆಯಲ್ಲಿ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ನೇರ್ಲಗುಂಟೆ ಎಸ್.ತಿಪ್ಪೇಸ್ವಾಮಿ, ಎಸ್.ಲಿಂಗಮೂರ್ತಿ, ಜಿಲ್ಲಾಧ್ಯಕ್ಷ ಎ.ಮುರುಳಿ, ಮಧುಗಿರಿ ಜಿಲ್ಲಾಧ್ಯಕ್ಷ ಬಿ.ಸಿ.ಹನುಮಂತೇಗೌಡ ಮತ್ತಿತರರು ಭಾಗವಹಿಸಿದ್ದರು.