By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    11 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    11 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    12 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    18 hours ago
    ಚಿತ್ರದುರ್ಗ ಅಂಚೆ ಕಚೇರಿ
    ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    12 minutes ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 day ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 day ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    7 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    19 minutes ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    23 hours ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    1 day ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    2 days ago
Reading: Pomegranate crop: ಜಿಲ್ಲೆಯ ರೈತರಿಗೆ ಸಂತಸದ ಸುದ್ದಿ | 10 ಸಾವಿರ ಎಕರೆಯಲ್ಲಿ ದಾಳಿಂಬೆ ಬೆಳೆ ವಿಸ್ತರಣೆ ಗುರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Pomegranate crop: ಜಿಲ್ಲೆಯ ರೈತರಿಗೆ ಸಂತಸದ ಸುದ್ದಿ | 10 ಸಾವಿರ ಎಕರೆಯಲ್ಲಿ ದಾಳಿಂಬೆ ಬೆಳೆ ವಿಸ್ತರಣೆ ಗುರಿ

News Desk Chitradurga News
Last updated: 26 August 2024 12:40
News Desk Chitradurga News
2 years ago
Share
press meet
ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಬಸಪ್ಪ ಬೋಗಿ ಮಾತನಾಡಿದರು
SHARE

CHITRADURGA NEWS | 26 AUGUST 2024
ಚಿತ್ರದುರ್ಗ: ಜಿಲ್ಲೆಯಲ್ಲಿ 10,000 ಎಕರೆ ಪ್ರದೇಶದಲ್ಲಿ ದಾಳಿಂಬೆ ಬೆಳೆ ವಿಸ್ತರಣೆ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಬಸಪ್ಪ ಬೋಗಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಂದಿನ 5 ವರ್ಷಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಯೋಜನೆಗೆ ಒಳಪಟ್ಟ 6 ತಾಲ್ಲೂಕುಗಳ ಒಟ್ಟು 10,000 ಎಕರೆ ಪ್ರದೇಶದಲ್ಲಿ ದಾಳಿಂಬೆ ಬೆಳೆಯನ್ನು ವಿಸ್ತರಿಸಬೇಕು ಎಂದು ಗುರಿ ಗೊತ್ತುಪಡಿಸಲಾಗಿದೆ’ ಎಂದರು.

‘ರೈತರು, ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ರೈತರ ಆದಾಯ ಹೆಚ್ಚಿಸುವುದು ನಮ್ಮ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯು ದಾಳಿಂಬೆ ಬೆಳೆಯಲ್ಲಿ ಪ್ರಥಮ ಸ್ಥಾನಕ್ಕೆ ಬಂದು ಇತರ ಜಿಲ್ಲೆಗಳಿಗೆ ಹಾಗೂ ರಾಜ್ಯಗಳಿಗೆ ಮಾದರಿ ಆಗಬೇಕು ಎಂಬುದು ನಮ್ಮ ಕನಸಾಗಿದೆ’ ಎಂದು ತಿಳಿಸಿದರು.

‘ಶೀಘ್ರದಲ್ಲೇ ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಜೊತೆ ಸೇರಿ ’ದಾಳಿಂಬೆ ಕ್ಲಸ್ಟರ್‌ ಅಭಿವೃದ್ಧಿ’ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಚಿತ್ರದುರ್ಗದಲ್ಲಿ ಎಐಸಿ ಕೇಂದ್ರ ಕಚೇರಿ ಕಾರ್ಯನಿರ್ವಹಿಸಲಿದ್ದು, ಈ ಹಿನ್ನೆಲೆಯಲ್ಲಿ ಎಐಸಿ ಅಧ್ಯಕ್ಷ ಬಿ.ಎಂ.ಫಾರೂರ್‌ ಸಮಾರಂಭ ಆಯೋಜಿಸಲಿದ್ದಾರೆ’ ಎಂದರು.

ಕ್ಲಿಕ್ ಮಾಡಿ ಓದಿ: ವಾರದೊಳಗೆ ಭೂಸ್ವಾಧೀನ ಪೂರ್ಣಗೊಳಿಸಿ | ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸೂಚನೆ

‘ತುಮಕೂರು, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳ ಒಂಬತ್ತು ತಾಲ್ಲೂಕುಗಳು ಕೇಂದ್ರ ಸರ್ಕಾರದ ದಾಳಿಂಬೆ ಕ್ಲಸ್ಟರ್ ಅಭಿವೃದ್ಧಿ ಯೋಜನೆಗೆ ಆಯ್ಕೆಯಾಗಿವೆ. ಅನುಷ್ಠಾನ ಸಂಸ್ಥೆಯಾಗಿ ಎಐಸಿ (ಅಸೋಸಿಯೇಟೆಡ್‌ ಇಂಡಸ್ಟ್ರಿಯಲ್ ಕಾರ್ಪೊರೇಷನ್) ಕಾರ್ಯಾಚರಣೆ ನಡೆಸಲಿದೆ. ದಾಳಿಂಬೆ ಬೆಳೆ ಸಮಗ್ರ ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರವು ದೇಶದಾದ್ಯಂತ 53 ಕ್ಲಸ್ಟರ್ ಗಳನ್ನು ಗುರುತಿಸಿದ್ದು, ರಾಜ್ಯದ ತುಮಕೂರು, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳು ಇದರಲ್ಲಿ ಸೇರಿವೆ’ ಎಂದು ತಿಳಿಸಿದರು.

‘ತುಮಕೂರು ಜಿಲ್ಲೆಯ ಶಿರಾ, ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಚಳ್ಳಕೆರ ಹಾಗೂ ಮೊಳಕಾಲೂರು, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಮತ್ತು ಕೂಡ್ಲಿಗಿ ತಾಲ್ಲೂಕುಗಳು ಈ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುತ್ತವೆ. 5 ವರ್ಷಗಳ ಅವಧಿಯ ಈ ಯೋಜನೆಗೆ ರಾಷ್ಟ್ರೀಯ ತೋಟಗಾರಿಕೆ ಮಂಡಳಿ, ರಾಜ್ಯದ ಕೃಷಿ ಇಲಾಖೆಗೆ ಒಳಪಡುವ ಕ್ಯಾಪ್ಪೆಕ್‌ (ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು, ನಿಗಮ ನಿಯಮಿತ) ಹಾಗೂ ಎಐಸಿ, ಇವುಗಳ ತ್ರಿಪಕ್ಷೀಯ ಸಹಯೋಗದಲ್ಲಿ ಚಾಲನೆ ನೀಡಲಾಗಿದೆ’ ಎಂದರು.

‘ಮಳೆ ಕಡಿಮೆ ಬೀಳುವ ಪ್ರದೇಶಗಳು ದಾಳಿಂಬೆ ಬೆಳೆಗೆ ಸೂಕ್ತ ಎಂದು ಪರಿಗಣಿಸಲಾಗಿದ್ದು, ಅದರ ಜೊತೆಗೆ ಇಲ್ಲಿನ ಮಣ್ಣಿನ ಗುಣವು ಬೆಳೆಗೆ ಅನುಕೂಲಕರವಾಗಿರುವುದರಿಂದ ಮೇಲಿನ ಈ ಜಿಲ್ಲೆಗಳ ವ್ಯಾಪ್ತಿಗೆ ಸೇರಿದ ಪ್ರದೇಶವು ಯೋಜನೆಗೆ ಒಳಪಟ್ಟಿದೆ. ಈ ಯೋಜನೆಯಡಿಗೆ ಒಳಪಟ್ಟ ಜಿಲ್ಲೆಗಳ ವ್ಯಾಪ್ತಿಯಲ್ಲಿ ದಾಳಿಂಬೆ ಬೆಳೆಯುವ ರೈತರಿ ಶೇಕಡಾ 40ರಷ್ಟು ಸಬ್ಸಿಡಿ ದರದಲ್ಲಿ ಸಮಗ್ರ ಸೌಲಭ್ಯದ ಬೆಂಬಲ ಒದಗಿಸಲಾಗುತ್ತದೆ. ಒಟ್ಟಾರೆ, ಈ ಪ್ರದೇಶದಲ್ಲಿ 15,000 ಎಕರೆ ವಿಸ್ತೀರ್ಣವನ್ನು (ಸುಮಾರು 6,000 ಹೆಕ್ಟೇರ್) ಯೋಜನೆಯ ವ್ಯಾಪ್ತಿಗೆ ಒಳಪಡಿಸುವ ಗುರಿ ಹಾಕಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಸಿದ್ದರಾಮಯ್ಯ ಹಠಾವೋ ದಲಿತ್ ಬಚವೋ | 28ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ

ಎಲ್ಲಾ ಸೌಲಭ್ಯಗಳನ್ನು ದಾಳಿಂದ ಬೆಳೆಯುವ ರೈತರಿಗೆ ಒಂದೇ ಸೂರಿನಡಿ ಲಭ್ಯವಾಗಿಸುವುದು ಯೋಜನೆಯ ಪ್ರಮುಖ ಅಂಶವಾಗಿರುತ್ತದೆ. ರೈತರಿಗೆ ರೋಗರಹಿತ ದಾಳಿಂಬೆ ಸಸಿಗಳನ್ನು ನೀಡಲು ಹೈಟೆಕ್ ನರ್ಸರಿ ಬೆಳಸುವುದು ಸಸಿ ಆರೋಗ್ಯ ಕ್ರಿನಿಕ್ ಸ್ನಾವನೆ, ಸಮಗ್ರ ವ್ಯಾಕ್ ಹೌಸ್, ಜೈವಿಕ ನಿಯಂತ್ರಣ ಪ್ರಯೋಗಾಲಯಗಳ ಸ್ಥಾಪನೆ, ಸಮಗ್ರ ಪೌಷ್ಟಿಕಾಂಶ ಅಳವಡಿಕೆ (ಐಎನ್‌ಎಂ) ಹಾಗೂ ಸಮಗ್ರ ಪೀಡೆ ನಿರ್ವಹಣೆ (ಐಪಿಎಂ) ಅಳವಡಿಕೆ. ಹಳೆಯ ದಾಳಿಂಬೆ ತೋಟಗಳ ಪುನರುಜೀವ ದಟ್ಟಣೆಯ ನಾಟಿಯೊಂದಿಗೆ ಬೆಳೆ ಪ್ರದೇಶ ವಿಸ್ತರಣೆ, ನಿಖರ ಹವಾಮಾನ ವರದಿ ಒದಗಿಸುವುದು, ಮತ್ತು ರೈತರಿಗೆ ಸಾಮರ್ಥ್ಯವೃದ್ಧಿ ತರಬೇತಿಗಳ ಬಗ್ಗೆ, ಎಐಸಿ ಗಮನ ಕೇಂದ್ರೀಕರಿಸಲಿದೆ. ಜೊತೆಗೆ, ಸಣ್ಣ ಹಾಗೂ ಅತಿಸಣ್ಣ ದಾಳಿಂಬೆ ಬೆಳೆ ರೈತರಿಗೆ ಬೋರ್ ವೆಲ್ ಕೊರೆಸುವುದು ಹಾಗೂ ಅದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವುದಕ್ಕೆ, ಸಂಬಂಧಿಸಿದಂತೆ ತೊಂದರೆಗಳಿದ್ದು, ಅದಕ್ಕೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಸರ್ಕಾರದ ಮಟ್ಟದಲ್ಲಿ ಗಮನ ಸೆಳೆಯಲಾಗುವುದು ಎಂದು ವಿವರಿಸಿದರು.

ತೋಟಗಾರಿಕೆ ಇಲಾಖೆ ಅಧಿಕಾರಿಗಳಾದ ಮನೋಜ್ ಕುಶಾಲಪ್ಪ, ಚಂದ್ರಶೇಖರ್‌ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:cluster. HorticultureCropextensionFarmershappinessPomegranateTargetಕ್ಲಸ್ಟರ್‌. ತೋಟಗಾರಿಕೆಗುರಿದಾಳಿಂಬೆಬೆಳೆರೈತರುವಿಸ್ತರಣೆಸಂತಸ
Share This Article
Facebook Email Print
Previous Article ಚಿತ್ರದುರ್ಗ ನಗರಸಭೆ City council election: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ | ನಾಮಪತ್ರ ಸಲ್ಲಿಸಿದ ಸದಸ್ಯೆಯರು
Next Article sumitha - sridevi City Council: ನಗರಸಭೆಯಲ್ಲಿ ಶಾಸಕ ವೀರೇಂದ್ರ ಪಪ್ಪಿ ಮೇಲುಗೈ | ಬಹುಮತವಿದ್ದು ಸೋತ ಬಿಜೆಪಿ | ಪಕ್ಷೇತರ ಸದಸ್ಯೆಗೆ ಒಲಿದ ಅಧ್ಯಕ್ಷ ಗಾದಿ
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
Dina Bhavishya
Pineapple
ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
Life Style
ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
ಮುಖ್ಯ ಸುದ್ದಿ
ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up