
CHITRADURGA NEWS | 18 APRIL 2025
ಚಿತ್ರದುರ್ಗ: ನಗರದ ಮುರುಘಾಮಠದಿಂದ ಕವಾಡಿಗರ ಹಟ್ಟಿ ಮಾರ್ಗ ಮೂಲಕ ಹೊಳಲ್ಕೆರೆ ರಸ್ತೆಗೆ ಸಂಪರ್ಕಿಸುವ ರಸ್ತೆಯನ್ನು ವಿಸ್ತರಿಸಿ ಅಭಿವೃದ್ಧಿಪಡಿಸುವ ಕಾಮಗಾರಿ ಹಲವು ವರ್ಷಗಳಿಂದಲೂ ನಡೆಯುತ್ತಲೇ ಇದೆ. ಈ ಮಾರ್ಗದಲ್ಲಿ ಕವಾಡಿಗರ ಹಟ್ಟಿ ಬಳಿ, ಹಾಗೂ ಮುಂದಿನ ದಾರಿಯಲ್ಲಿ ರಸ್ತೆ ಗುಂಡಿ ಬಿದ್ದು ವಾಹನಗಳು ಅಪಘಾತಕ್ಕೆ ಒಳಗಾಗುತ್ತಿವೆ. ರಸ್ತೆ ಕಾಮಗಾರಿ ಇದುವರೆಗೂ ಪೂರ್ಣಗೊಂಡಿಲ್ಲ ಎಂದು ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
Also Read: ರಾಶಿ ಅಡಿಕೆ ಬೆಲೆ 58 ಸಾವಿರದತ್ತ ದಾಪುಗಾಲು
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ಅಧಿಕಾರಿಗಳು ಉತ್ತರಿಸಿ, ಮಹಾರಾಷ್ಟ್ರಾದ ಎಸ್.ಎಂ. ಔತಾಡೆ ಎಂಬುವವರು ಕಾಮಗಾರಿಯ ಗುತ್ತಿಗೆ ಪಡೆದಿದ್ದು, ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳದೆ, ಅಸಡ್ಡೆ ತೋರುತ್ತಿದ್ದಾರೆ, ಹಲವು ಬಾರಿ ನೋಟಿಸ್ ನೀಡಿದರೂ ಉಪಯೋಗವಾಗಿಲ್ಲ ಎಂದರು.
Also Read: ಹೊಳಲ್ಕೆರೆ, ಅಮೃತಪುರ ನಿಲ್ದಾಣದಲ್ಲಿ ಹೊಸಪೇಟೆ-ಬೆಂಗಳೂರು ರೈಲು ನಿಲುಗಡೆ | ಗೋವಿಂದ ಕಾರಜೋಳ
ಕೂಡಲೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸಿ, ಉಳಿದ ಕಾಮಗಾರಿಯನ್ನು ಬೇರೆಯವರಿಗೆ ವಹಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
