
CHITRADURGA NEWS | 18 AUGUST 2025
ಚಿತ್ರದುರ್ಗ: ಹೊಳಲ್ಕೆರೆ ಪುರಸಭೆ ವ್ಯಾಪ್ತಿಯಲ್ಲಿ ಪಿಓಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇದನ್ನೂ ಓದಿ: ಮಹಿಳೆ ಮೇಲೆ ಚಿರತೆ ದಾಳಿ | ಮೆಕ್ಕೆಜೋಳಕ್ಕೆ ಗೊಬ್ಬರ ಹಾಕುವಾಗ ಘಟನೆ
ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡಲು ನಗರ ಸಭೆ, ಪೊಲೀಸ್, ಅಗ್ನಿ ಶಾಮಕ ಸೇರಿದಂತೆ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಪ್ರತಿಷ್ಠಾಪನೆ ಸ್ಥಳಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‍ನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪ್ರತಿನಿತ್ಯ ಉತ್ಪನ್ನವಾಗುವ ತ್ಯಾಜ್ಯವನ್ನು ಪುರಸಭೆ ಕಸ ಸಂಗ್ರಹ ವಾಹನಕ್ಕೆ ನೀಡಬೇಕು. ಗಣೇಶ ವಿಸರ್ಜನೆಗೆ ತಾಲ್ಲೂಕು ಪಂಚಾಯಿತಿ ಹಿಂಭಾಗದಲ್ಲಿರುವ ಎನ್.ಇ.ಎಸ್. ಕಾಲೋನಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.
ಪಿ.ಓ.ಪಿ, ರಾಸಾಯನಿಕ ಬಣ್ಣಗಳ ವಿಗ್ರಹ ಮಾರಾಟ ಹಾಗೂ ನಿಗದಿತ ಸ್ಥಳ ಹೊರತು ಪಡಿಸಿ ಗಣೇಶ ವಿರ್ಸಜನೆ ಮಾಡುವುದು ಕಂಡುಬಂದರೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಇದನ್ನೂ ಓದಿ: ಗೋಡಂಬಿ ಬೆಳೆ | ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ
ಸಾರ್ವಜನಿಕರು ಪರಿಸರ ಸ್ನೇಹಿ, ಬಣ್ಣ ರಹಿತ, ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸುವಂತೆ ಹೊಳಲ್ಕೆರೆ ಪುರಸಭೆ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
