CHITRADURGA NEWS | 05 JUNE 2026
ಚಿತ್ರದುರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಹೊಸ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
ಪಿ.ಯು.ಸಿ, ಡಿಪ್ಲೊಮಾ ಹಾಗೂ ಐ.ಟಿ.ಐ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಅವಕಾಶ ಕಲ್ಪಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವೆಬ್‍ಸೈಟ್ https://shp.karnataka.gov.in ನಲ್ಲಿ ಆನ್‍ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ.
ಇದನ್ನೂ ಓದಿ: ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗಾಗಿ ವಿದ್ಯಾರ್ಥಿಗಳು ಹತ್ತಿರದ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳು ಮತ್ತು ಅಲ್ಪಸಂಖ್ಯಾತರ ಜಿಲ್ಲಾ ಅಥವಾ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
