Connect with us

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ | ಅರ್ಜಿ ಆಹ್ವಾನ

    ಬಾಲಕರ ವಿದ್ಯಾರ್ಥಿ ನಿಲಯ

    ಮುಖ್ಯ ಸುದ್ದಿ

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ | ಅರ್ಜಿ ಆಹ್ವಾನ

    CHITRADURGA NEWS | 04 JULY 2024

    ಚಿತ್ರದುರ್ಗ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2024-25ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ.

    ಇದನ್ನೂ ಓದಿ: ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ | ಉಚಿತ ಚಿಕಿತ್ಸೆ

    ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗ, ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ ವರ್ಗದ ವಾರ್ಷಿಕ ಆದಾಯ 2.50 ಲಕ್ಷ, ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗಗಳ ವಾರ್ಷಿಕ ಆದಾಯ ರೂ. 1 ಲಕ್ಷ ಮೀರಿರಬಾರದು.

    ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನ್ನು ಪರಿಶೀಲಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ದೋಷಗಳು ಉಂಟಾದಲ್ಲಿ bcwdhelpline@gmail.comಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ, ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಸೂಚಿಸಿದೆ.

    ಇದನ್ನೂ ಓದಿ: ವಿದ್ಯಾರ್ಥಿ ನಿಲಯ ಪ್ರವೇಶಾತಿ ವಿಳಂಬ | ಎಬಿವಿಪಿ ಜಿಲ್ಲಾ ಘಟಕ ಪ್ರತಿಭಟನೆ

    ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 8050770004, 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಚಿತ್ರದುರ್ಗ ತಾಲ್ಲೂಕು ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top